Publish Date: Fri, 26 Jan 2024 (16:43 IST)
Updated Date: Fri, 26 Jan 2024 (16:57 IST)
ಬೆಂಗಳೂರು : ಗಣರಾಜ್ಯೋತ್ಸವದ 75 ನೇ ವರ್ಷದ ಈ ಸಂದರ್ಭವನ್ನು ರಾಜ್ಯಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ.ಸರ್ಕಾರಿ ಯೋಜನೆಗಳನ್ನು ಹಾಗೂ ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ನೀಡಲಾಗುತ್ತಿರುವ ಸವಲತ್ತುಗಳನ್ನು ಸಮಾಜದ ಪ್ರತಿಯೊಬ್ಬ ವ್ಯಕ್ತಿಗೂ ಸಹ ತಲುಪಿಸಲು ಸರ್ಕಾರವು ಶ್ರಮಿಸುತ್ತಿರುವುದಾಗಿ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.
ಕರ್ನಾಟಕ ರಾಜ್ಯ ಸರ್ಕಾರವು ಎಲ್ಲ ವರ್ಗಗಳ ಏಳಿಗೆಗಾಗಿ ಅವಿರತವಾಗಿ ಶ್ರಮಿಸುತ್ತಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು. ಶುಕ್ರವಾರ ನಗರದ ಮಾಣಿಕ್ ಶಾ ಪೆರೇಡ್ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಿದ ಅವರು ಧ್ವಜಾರೋಹಣವನ್ನು ನೆರೆವೇರಿಸಿದ ಬಳಿಕ ರಾಜ್ಯ ಜನತೆಯನ್ನುದ್ದೇಶಿಸಿ ಮಾತನಾಡಿದರು.
ರಾಜ್ಯದ ವಿವಿಧ ದಲಿತ ವರ್ಗ, ಅಲ್ಪಸಂಖ್ಯಾತ ವರ್ಗ ಹಾಗೂ ನಿಮ್ನ ವರ್ಗಗಳ ಅಭಿವೃದ್ಧಿಗಾಗಿ ಸರ್ಕಾರವು ಕೈಗೊಂಡಿರುವ ಕ್ರಮಗಳನ್ನು ಕುರಿತು ರಾಜ್ಯಪಾಲರು ತಮ್ಮ ಭಾಷಣದಲ್ಲಿ ವಿವರಣೆ ನೀಡಿದರು. ಜೊತೆಗೆ ದೇಶದ ಅಭಿವೃದ್ಧಿಯಲ್ಲಿ ತನ್ನದೇ ಕೊಡುಗೆ ನೀಡುತ್ತಿರುವ ಕರ್ನಾಟಕ ರಾಜ್ಯವು ಎಲ್ಲಾ ಕ್ಷೇತ್ರಗಳಲ್ಲೂ ಮುನ್ನಡೆ ಸಾಧಿಸುತ್ತಿದೆ ಎಂದರು.