Select Your Language

Notifications

webdunia
webdunia
webdunia
webdunia

ದೇಶದಲ್ಲೇ ರಾಜ್ಯದ ಕೊರೊನಾ ಪಾಸಿಟಿವ್ ಪ್ರಮಾಣ ಎಷ್ಟಿದೆ?

ದೇಶದಲ್ಲೇ ರಾಜ್ಯದ ಕೊರೊನಾ ಪಾಸಿಟಿವ್ ಪ್ರಮಾಣ ಎಷ್ಟಿದೆ?
ಹಾಸನ , ಮಂಗಳವಾರ, 2 ಜೂನ್ 2020 (21:05 IST)
ರಾಜ್ಯದಲ್ಲಿ ಕೋವಿಡ್ - 19 ಪರೀಕ್ಷೆಗೆ ಒಳಗಾದವರಲ್ಲಿ ಪಾಸಿಟಿವ್ ವರದಿ ದೃಢಪಡುತ್ತಿರುವವರ ಪ್ರಮಾಣ ಇಡೀ ದೇಶದಲ್ಲಿಯೇ ಅತ್ಯಂತ ಕಡಿಮೆ ಇದೆ.

ಹೀಗಂತ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಹೇಳಿದ್ದಾರೆ. ರಾಜ್ಯದಲ್ಲಿ ಇದುವರೆಗೆ 3,04,816 ಮಂದಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅವರಲ್ಲಿ 3450 ಮಂದಿಗೆ ಮಾತ್ರ ಸೋಂಕು ಪಾಸಿಟಿವ್ ಇರುವುದು ದೃಢಪಟ್ಟಿದೆ. ಅಂದರೆ ಇದರ ಪ್ರಮಾಣ ಶೇಕಡ 1.1 ರಷ್ಟಿದ್ದು, ಇದು ದೇಶದಲ್ಲಿಯೇ ಅತ್ಯಂತ ಕಡಿಮೆಯಾದದ್ದು ಎಂದಿದ್ದಾರೆ.

ರಾಜ್ಯದಲ್ಲಿ ಈ ಸೋಂಕು ಕಾಣಿಸಿಕೊಂಡಾಗ ಕೇವಲ 2 ಕೋವಿಡ್ ಪರೀಕ್ಷಾ ಕೇಂದ್ರಗಳಿದ್ದವು, ಈಗ ರಾಜ್ಯದಲ್ಲಿ 64 ಕೋವಿಡ್ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಿದ್ದೇವೆ. ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಕೋವಿಡ್ ಶಂಕಿತರನ್ನು ಪರೀಕ್ಷೆಗೆ ಒಳಪಡಿಸಲಾಗುವುದು ಎಂದಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಸಂಚಾರಿ ಕಾನ್ಸಟೇಬಲ್ ಸೇರಿ 16 ಜನಕ್ಕೆ ಕೊರೊನಾ