ಪ್ರೈವೆಸಿಗೆ ಅಡ್ಡಿಯಾಗುತ್ತಾಳೆಂದು ಮಗಳನ್ನು ಮುಗಿಸಿದ ಮಲತಂದೆ ಕೊನೆಗೂ ಅರೆಸ್ಟ್‌

Sampriya
ಮಂಗಳವಾರ, 28 ಅಕ್ಟೋಬರ್ 2025 (20:12 IST)
ಬೆಂಗಳೂರು: ಪಲ್ಲಂಗದಾಟಕ್ಕೆ ಅಡ್ಡಿಯಾಗುತ್ತಿದ್ದಾಳೆಂದು ಮಗಳನ್ನೇ ಕೊಲೆ ಮಾಡಿದ ಮಲತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.

ಕೊಲೆಯಾದ ಬಾಲಕಿ ಸಿರಿಯ ತಾಯಿ ಶಿಲ್ಪಾ, ಆರೋಪಿ ದರ್ಶನ್‌ಗೆ ಸಾಮಾಜಿಕ ಜಾಲತಾಣ ಮೂಲಕ ಪರಿಚಯವಾಗಿದ್ದಾರೆ. ನಂತರ ದರ್ಶನ್, ಶಿಲ್ಪಾಳನ್ನು ಮದುವೆಯಾಗಿದ್ದಾನೆ. ಬಳಿಕ ದರ್ಶನ್ ತನ್ನ ಪ್ರೈವಸಿಯ ಬಗ್ಗೆ ತಲೆಕೆಡಿಸಿಕೊಂಡಿದ್ದ. ಹೀಗಾಗಿ ಆರೋಪಿಯು ಬಾಲಕಿಯ ಅಜ್ಜಿ ಇರೋತನಕ ಯಾವುದೇ ಕಿರಿಕ್ ಮಾಡುತ್ತಿರಲಿಲ್ಲ. ಆದರೆ ಆಕೆಯ ಅಜ್ಜಿ ಇತ್ತೀಚೆಗೆ ಮೃತಪಟ್ಟಿದ್ದರು.

ಇದಾದ ಬಳಿಕ ದರ್ಶನ್‌,ಬಾಲಕಿಗೆ ಸಿರಿಗೆ ಹಿಂಸೆ ನೀಡಲು ಶುರು ಮಾಡಿದ್ದಾನೆ. ನಾಲ್ಕು ದಿನಗಳ ಹಿಂದೆ ಮನೆಗೆ ಬಂದಾಗ ಆರೋಪಿ ಬಾಲಕಿಯನ್ನ ಕೊಲೆ ಮಾಡಿದ್ದ. ಬಾಲಕಿಯನ್ನ ಕೊಲೆ ಮಾಡಿದ್ದಲ್ಲದೆ ಸಾಕ್ಷ್ಯ ನಾಶಕ್ಕೂ ಯತ್ನಿಸಿದ್ದ. ಆದರೆ ಅದೇ ವೇಳೆ ಶಿಲ್ಪಾ ಮನೆಗೆ ಬಂದಿದ್ದರಿಂದ ಗಾಬರಿಯಾದ ದರ್ಶನ್, ಆಕೆಯನ್ನ ರೂಮಿನಲ್ಲಿ ಕೂಡಿ ಹಾಕಿ ಎಸ್ಕೇಪ್ ಆಗಿದ್ದ.

ಪೊಲೀಸರು ಆತನ ಬೆನ್ನು ಬಿದ್ದು, ನೆಲಮಂಗಲ ಬಳಿ ಹೆಡೆಮುರಿ ಕಟ್ಟಿದ್ದಾರೆ. ಸದ್ಯ ಪ್ರೈವಸಿ ತೊಂದರೆಯಿಂದಲೇ ದರ್ಶನ್ ಬಾಲಕಿಯನ್ನು ಕೊಲೆ ಮಾಡಿರೋದು ಗೊತ್ತಾಗಿದೆ. ಪೊಲೀಸರು ಆತನನ್ನು ತೀವ್ರ ವಿಚಾರಣೆ ಒಳಪಡಿಸಿದ್ದು, ಮತ್ತಷ್ಟು ವಿಚಾರ ಬಯಲಾಗಲಿದೆ.

<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಣಾಮ್ ಸಾಬ್ ಪ್ರೊಟೆಸ್ಟ್ ಮಾಡ್ತಿದ್ದೀನಿ.. ಬರ್ತ್ ಡೇ ದಿನ ಬಿವೈ ವಿಜಯೇಂದ್ರಗೆ ಅಮಿತ್ ಶಾ ಕಾಲ್ video

ಮೈಸೂರಿಗೆ ಫ್ಲೈ ಓವರ್ ಬೇಡವೇ ಬೇಡ: ಸಿಎಂಗೆ ಪತ್ರ ಬರೆದ ಸಂಸದ ಯದುವೀರ್ ಒಡೆಯರ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜಿಯೋ ಫೋನ್ ನಲ್ಲಿ ಬಳಸಿದ್ರೆ ಅದಾನಿಗೆ ದುಡ್ಡು: ರಾಹುಲ್ ಗಾಂಧಿ ಹೇಳಿಕೆ ಭಾರೀ ಟ್ರೋಲ್ video

ಮುಂದಿನ ಸುದ್ದಿ
Show comments