ಪಕ್ಷೇತರ ಶಾಸಕರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಬುಧವಾರಕ್ಕೆ ಮುಂದೂಡಿದ ಸುಪ್ರೀಂಕೋರ್ಟ್

ಮಂಗಳವಾರ, 23 ಜುಲೈ 2019 (13:29 IST)
ಬೆಂಗಳೂರು : ಬಹುಮತ ಸಾಬೀತಿಗೆ ಸಿಎಂಗೆ ನಿರ್ದೇಶನ ಕೋರಿ  ಪಕ್ಷೇತರ ಶಾಸಕರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ.
ಪಕ್ಷೇತರ ಶಾಸಕರಾರದ ನಾಗೇಶ್ ಮತ್ತು ಶಂಕರ್ ಅವರು ವಿಶ್ವಾಸ ಮತಯಾಚನೆ ಇಂದೇ ನಡೆಸಬೇಕೆಂದು ಆದೇಶ ನೀಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸುತ್ತಿದ್ದ ಮುಖ್ಯ ನ್ಯಾ. ರಂಜನ್ ಗೊಗೋಯ್ ಅವರಿದ್ದ ತ್ರಿಸದಸ್ಯ ಪೀಠಕ್ಕೆ  ಸ್ಪೀಕರ್ ಪರ ವಕೀಲರಾದ ಅಭಿಷೇಕ್ ಮನುಸಿಂಘ್ವಿ ಇಂದೇ ವಿಶ್ವಾಸಮತಯಾಚನೆಯ ವಿಶ್ವಾಸ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ, ವಿಚಾರಣೆ ಬಾಕಿ ಉಳಿಸಿ, ನಾಳೆಗೆ ವಿಚಾರಣೆಯನ್ನು ಮುಂದೂಡಿದರು.


ಹಾಗೇ ಪರೋಕ್ಷವಾಗಿ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಎರಡನೇ ಬಾರಿ ಎಚ್ಚರಿಕೆ ನೀಡಿದ ಸುಪ್ರೀಂ ಕೋರ್ಟ್ ಇಂದು ವಿಶ್ವಾಸ ಮತಯಾಚನೆ ವಿಚಾರದಲ್ಲಿ ಸ್ಪೀಕರ್ ನಡೆಯನ್ನು ಆಶಾಭಾವದಿಂದ ಕಾದು ನೋಡುತ್ತೇವೆ ಎಂದು ತಿಳಿಸಿದೆ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಪ್ರತಿಭಟನೆಗೆ ಮುಂದಾದ ಕಾಂಗ್ರೆಸ್ ನಾಯಕರ ಹಾದಿ ತಪ್ಪಿಸಲು ಅತೃಪ್ತರಿಂದ ಹೊಸ ಆಟ