Select Your Language

Notifications

webdunia
webdunia
webdunia
webdunia

ನ್ಯೂ ಜರ್ಸಿಗೆ ತೆರಳಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ನ್ಯೂ ಜರ್ಸಿಗೆ ತೆರಳಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು
ರಾಯಚೂರು , ಭಾನುವಾರ, 31 ಮಾರ್ಚ್ 2019 (12:52 IST)
ಅಮೆರಿಕಾದ ನ್ಯೂ ಜರ್ಸಿಯಲ್ಲಿ ಅನುಮಾನಾಸ್ಪದವಾಗಿ ರಾಜ್ಯದ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದಾನೆ.

ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣ ಮೂಲದ ಯುವಕ ಅಮೆರಿಕಾದ ನ್ಯೂ ಜರ್ಸಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಉನ್ನತ ವಿದ್ಯಾಭ್ಯಾಸಕ್ಕೆ ಅಮೆರಿಕಾಗೆ ತೆರಳಿದ್ದ ಯುವಕ ಸಾವನ್ನಪ್ಪಿದ್ದು, ಘಟನೆಗೆ ಕಾರಣ ತಿಳಿದುಬಂದಿಲ್ಲ.

ಸಿಂಧನೂರು ಪಟ್ಟಣದ ಗಾಂಧಿನಗರದ ಮಣಿದೀಪ್​ (28) ಮೃತ ಯುವಕ ಎಂದು ಗುರುತಿಸಲಾಗಿದೆ. ಯುವಕ ಮೃತಪಟ್ಟಿರುವುದು ದೂರವಾಣಿ ಮೂಲಕ ತಂದೆ ಶ್ರೀನಿವಾಸರಿಗೆ ತಿಳಿದಿದೆ. ಘಟನೆಯಿಂದ ಪೋಷಕರು ದಿಗ್ಭ್ರಮೆಗೊಂಡಿದ್ದಾರೆ. ಮಣಿಪಾಲ್​ನಲ್ಲಿ ಎಂಬಿಬಿಎಸ್ ಪೂರ್ಣಗೊಳಿಸಿ ಅಮೆರಿಕಾಗೆ ಉನ್ನತ ವಿದ್ಯಾಭ್ಯಾಸಕ್ಕೆ ತೆರಳಿದ್ದರು. ಆದ್ರೆ ಯಾವ ಕಾರಣಕ್ಕೆ ಯುವಕ ಮೃತಪಟ್ಟಿದ್ದಾನೆ ಎನ್ನುವ ಬಗ್ಗೆ ಕಾರಣ ತಿಳಿದು ಬಂದಿಲ್ಲ. ಘಟನೆಯಿಂದ ಪೋಷಕರು ಕಂಗಾಲಾಗಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಮುಖಂಡನ ಅಪಘಾತಕ್ಕೆ ಹೊಸ ಟ್ವಿಸ್ಟ್