Select Your Language

Notifications

webdunia
webdunia
webdunia
webdunia

ಶ್ರಮಜೀವಿಗಳ ಬೆವರಲ್ಲಿ ಬಿಟ್ಟಿ ತಿಂದವರ ಚರ್ಮ ಬೆಳ್ಳಗಿರಬಹುದು : ಪ್ರಿಯಾಂಕ್ ಖರ್ಗೆ

ಶ್ರಮಜೀವಿಗಳ ಬೆವರಲ್ಲಿ ಬಿಟ್ಟಿ ತಿಂದವರ ಚರ್ಮ ಬೆಳ್ಳಗಿರಬಹುದು : ಪ್ರಿಯಾಂಕ್ ಖರ್ಗೆ
ಕಲಬುರಗಿ , ಭಾನುವಾರ, 6 ಆಗಸ್ಟ್ 2023 (12:31 IST)
ಕಲಬುರಗಿ : ಶ್ರಮಜೀವಿಗಳ ಬೆವರಲ್ಲಿ ಬಿಟ್ಟಿ ತಿಂದವರ ಚರ್ಮ ಬೆಳ್ಳಗಿರಬಹುದು ಅಂತಾ ಸಚಿವ ಪ್ರಿಯಾಂಕ್ ಖರ್ಗೆ ಮಾಜಿ ಸಚಿವ ಆರಗ ಜ್ಞಾನೇಂದ್ರಗೆ ತಿರುಗೇಟು ನೀಡಿದ್ದಾರೆ.
 
ಬಿಜೆಪಿ ಪ್ರತಿಭಟನೆ ವೇಳೆ ʻಕಲ್ಯಾಣ ಕರ್ನಾಟಕ ಭಾಗದವರು ಸುಟ್ಟು ಕರಕಲಾಗಿರುತ್ತಾರೆ. ಖರ್ಗೆಯವರನ್ನ ನೋಡಿದರೆ ಗೊತ್ತಾಗುತ್ತದೆʼ ಎಂದು ಅವಹೇಳನ ಮಾಡಿದ್ದ ಆರಗ ಜ್ಞಾನೇಂದ್ರ ಹೇಳಿಕೆಗೆ ಟ್ವಿಟ್ ಮೂಲಕ ಪ್ರತಿಕ್ರಿಯಿಸಿರುವ ಅವರು, ಶತ-ಶತಮಾನಗಳಿಂದ ವರ್ಣಾಶ್ರಮದ ಹೆಸರಲ್ಲಿ ಶೋಷಣೆ ನಡೆಸಿ ಶ್ರಮಜೀವಿಗಳ ಬೆವರಲ್ಲಿ ಬಿಟ್ಟಿ ತಿಂದವರ ಚರ್ಮ ಬೆಳ್ಳಗಿರಬಹುದು. ಸ್ವಾಭಿಮಾನದಿಂದ ದುಡಿದು ತಿನ್ನುವವರ ಮೈ ಬಿಸಿಲಲ್ಲಿ ಸುಟ್ಟಿರುತ್ತದೆ ಎಂದು ಕುಟುಕಿದ್ದಾರೆ.

ಬಿಜೆಪಿ ಶಾಸಕನಿಗೆ ತಮ್ಮದೇ ಧಾಟಿಯಲ್ಲಿ ತಿರುಗೇಟು ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ, ನೀವು ಆಡಿರುವ ಮಾತು ಬರೀ ನಿಮ್ಮ ಮಾತುಗಳಲ್ಲ. ಕೇಶವ ಕೃಪಾದ ಪ್ರಭಾವದ ಮಾತು, ಬಿಜೆಪಿಯ ಆಂತರ್ಯದೊಳಗೆ ಅಡಗಿದ್ದ ಶೋಷಿತರ ಬಗೆಗಿನ ಅಸಹನೆ ಮಾತು. ಸುಟ್ಟು ಕರಕಲಾಗಿದ್ದು ನಿಮ್ಮ ಬುದ್ಧಿಯೇ ಹೊರತು ಕಲ್ಯಾಣ ಕರ್ನಾಟಕದ ಜನರಲ್ಲ ಎಂದಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಇಂಗುಗುಂಡಿಗೆ ಬಿದ್ದು 8ರ ಬಾಲಕ ದಾರುಣ ಸಾವು!