Select Your Language

Notifications

webdunia
webdunia
webdunia
webdunia

ವಿದ್ಯಾರ್ಥಿನಿಯರಿಗೆ ಹನಿಮೂನ್ ಹೇಗಿರುತ್ತೆ ಎಂದು ಕೇಳಿದ ಶಿಕ್ಷಕ!

ವಿದ್ಯಾರ್ಥಿನಿಯರಿಗೆ ಹನಿಮೂನ್ ಹೇಗಿರುತ್ತೆ ಎಂದು ಕೇಳಿದ ಶಿಕ್ಷಕ!
ಕೋಲಾರ , ಗುರುವಾರ, 8 ಡಿಸೆಂಬರ್ 2022 (15:02 IST)
ಕೋಲಾರ : 10ನೇ ತರಗತಿ ವಿದ್ಯಾರ್ಥಿನಿಯೊಂದಿಗೆ ಶಿಕ್ಷಕನೋರ್ವ ಅನುಚಿತವಾಗಿ ವರ್ತಿಸಿರುವ ಘಟನೆ ಕೋಲಾರ ತಾಲೂಕಿನ ನರಸಾಪುರ ಗ್ರಾಮದಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದಿದೆ.
 
ಕನ್ನಡ ಶಿಕ್ಷಕ ಪ್ರಕಾಶ್ ವಿರುದ್ಧ ವಿದ್ಯಾರ್ಥಿನಿಯರು ದೂರು ನೀಡಿದ್ದಾರೆ. ಶಿಕ್ಷಕ ಪ್ರಕಾಶ್, ಶಾಲೆಗೆ ಬರುವ ವಿದ್ಯಾರ್ಥಿನಿಯರಿಗೆ ಹನಿಮೂನ್ ಹೇಗಿರುತ್ತೆ ಎಂದು ಪ್ರಶ್ನೆ ಮಾಡುತ್ತಿದ್ದ.

ಅಷ್ಟೇ ಅಲ್ಲದೇ ವಿದ್ಯಾರ್ಥಿನಿಯರ ಮೈ ಮುಟ್ಟಿ ಮಾತನಾಡುವುದು ಅಶ್ಲೀಲವಾಗಿ ವರ್ತಿಸುವುದು ಮಾಡುತ್ತಿದ್ದನೆಂಬ ಆರೋಪಗಳು ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರ ಪೋಷಕರು ಶಾಲೆಯಲ್ಲಿ ಸಭೆ ಮಾಡಿ ಶಿಕ್ಷಕ ಪ್ರಕಾಶ್ಗೆ ಎಚ್ಚರಿಕೆ ನೀಡಿದ್ದಾರೆ.

ಇನ್ನೂ ಘಟನೆಗೆ ಸಂಬಂಧಿಸಿ ಕೋಲಾರ ಕ್ಷೇತ್ರ ಶಿಕ್ಷಣಾಧಿಕಾರಿ ಕಣ್ಣಯ್ಯ ಅವರು ಸ್ಥಳಕ್ಕಾಗಮಿಸಿ ವಿಚಾರಣೆ ನಡೆಸಿದ್ದಾರೆ. ಜೊತೆಗೆ ಶಾಲಾ ಆಡಳಿತ ಮಂಡಳಿಯಿಂದ ವರದಿ ಪಡೆದಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಹಣದ ಹೊಳೆಯನ್ನೇ ಹರಿಸಿದ್ದು ಎಷ್ಟು ದಿನ ನಡೆಯುತ್ತೆ ಗೊತ್ತಿಲ್ಲ ..!