ಮಗು ಆದ ಮೇಲೆ ಕೆಲಸಕ್ಕೆ ಹೋಗಲು ಆಗುತ್ತಿಲ್ಲವೆಂದು ಶಿಕ್ಷಕಿ ಇದೇನು ಮಾಡಿಬಿಟ್ಟಳು

Sampriya
ಗುರುವಾರ, 7 ನವೆಂಬರ್ 2024 (17:25 IST)
ಕಾರ್ಕಳ: ಮದುವೆಯಾಗಿ, ಮಗು ಆದ್ಮೇಲೆ ಕೆಲಸಕ್ಕೆ ಹೋಗಲು ಆಗುತ್ತಿಲ್ಲವೆಂದು ಖಿನ್ನತೆಗೆ ಒಳಗಾಗಿದ್ದ ಶಿಕ್ಷಕಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಾರ್ಕಳ ತಾಲ್ಲೂಕಿನ ಈದು ಗ್ರಾಮದಲ್ಲಿ ನಡೆದಿದೆ. ಮೃತ ಶಿಕ್ಷಕಿಯನ್ನು ಪ್ರಸನ್ನಾ ಎಂದು ಗುರುತಿಸಲಾಗಿದೆ.

2022ರಲ್ಲಿ ಕಾರ್ಕಳದ ಈದು ಗ್ರಾಮದ ರಾಜೇಶ್ ಅವರನ್ನು ಮದುವೆಯಾಗಿದ್ದ ಪ್ರಸನ್ನಾ ಅವರಿಗೆ ಒಂದು ಹೆಣ್ಣು ಮಗುವಿದೆ. ಇವರ ಪತಿ ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕೆಲಸದಲ್ಲಿದ್ದಾರೆ. ಪ್ರಸನ್ನಾ ಹೊಸ್ಮಾರ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ತಾಯಿ ಮನೆಯವರಲ್ಲಿ ಮಾತನಾಡುವಾಗ ಗಂಡನ ಮನೆಯಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ. ಆದರೆ ಇಷ್ಟು ಬೇಗ ಮಗು ಬೇಡವಾಗಿತ್ತು. ಮಗು ಆದ್ಮೇಲೆ ಕೆಲಸಕ್ಕೆ ಹೋಗಕ್ಕೆ ಆಗುತ್ತಿಲ್ಲ ಎಂದು ಹೇಳುತ್ತಿದ್ದರು. ಇದರಿಂದನೇ ಖಿನ್ನತೆಗೆ ಒಳಗಾಗಿದ್ದ ಪ್ರಸನ್ನಾಗೆ ಉಡುಪಿಯ ಬಾಳಿಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ನವೆಂಬರ್ 6ರಂದು ಮನೆಯ ಡೈನಿಂಗ್ ಹಾಲ್‌ನಿಂದ ಮಹಡಿಗೆ ಹೋಗುವ ಮೆಟ್ಟಿಲಿನ ಸ್ಟೀಲ್ ರಾಡಿಗೆ ಚೂಡಿದಾರ ಶಾಲ್ ನಿಂದ ಕುತ್ತಿಗೆಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ನರೇಂದ್ರ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ

15 ವರ್ಷ ಅವಧಿ ಮೀರಿದ ಇಲಾಖಾ ವಾಹನಗಳು ಗುಜರಿಗೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಅನುದಾನದಲ್ಲಿ ವಿಪಕ್ಷಗಳ ಕ್ಷೇತ್ರಕ್ಕೆ ತಾರತಮ್ಯ ಯಾಕೆ: ಆರ್ ಅಶೋಕ್ ಗರಂ

ಗೃಹಲಕ್ಷ್ಮಿ ತಪ್ಪು ಮಾಹಿತಿ: ಕೊನೆಗೂ ಸದನಕ್ಕೆ ಬಂದು ತಪ್ಪು ಒಪ್ಪಿಕೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಕುಂದಾ ತಿಂದು ಹೋಗಲು ಬಂದಿದ್ದೀರಾ ಎಂದು ಜನರು ಕೇಳುವಂತಾಗಿದೆ ಅಧಿವೇಶನ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments