Webdunia - Bharat's app for daily news and videos

Install App

ದಸರಾ ಹಬ್ಬದಂದೇ ದೇವಾಲಯ ಹುಂಡಿಗೆ ಕನ್ನ

Webdunia
ಶುಕ್ರವಾರ, 19 ಅಕ್ಟೋಬರ್ 2018 (19:49 IST)
ವಿಜಯದಶಮಿ ಹಬ್ಬದಂದೇ ದೇವಾಲಯದ ಬೀಗ ಒಡೆದು ದೇವಾಲಯದಲ್ಲಿದ್ದಂತಹ ಹುಂಡಿಯನ್ನು ಕಳ್ಳರು ಹೊತ್ತೊಯ್ದ ಘಟನೆ ನಡೆದಿದೆ.

ದೇವಾಲಯದಲ್ಲಿ ಕಳ್ಳರು ಹುಂಡಿಯಲ್ಲಿದ್ದ ಹಣವನ್ನು ಕದ್ದು ಪರಾರಿಯಾಗಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಬನ್ನೇರುಘಟ್ಟದಲ್ಲಿರುವ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯದಲ್ಲಿ  ನಡೆದಿದೆ. ನವರಾತ್ರಿಯ ವೇಳೆ ಅಪಾರವಾದ ಹಣ ಹುಂಡಿಯಲ್ಲಿ ಇರುವುದನ್ನು ಅರಿತ ಖದೀಮರು  2 ಗಂಟೆಯ ನಸುಕಿನ ವೇಳೆಯಲ್ಲಿ ಇಬ್ಬರು ಮುಸುಕುಧಾರಿಗಳು ದೇವಾಲಯದ ಬೀಗವನ್ನು ಒಡೆದು ಹುಂಡಿಯನ್ನು ಹೊತ್ತೊಯ್ಯದು  ಅದರಲ್ಲಿದ್ದ ಹಣವನ್ನು ತೆಗೆದುಕೊಂಡು ಹುಂಡಿಯನ್ನು ದೇವಾಲಯದ ಸಮೀಪದ ನಿರ್ಜನ ಪ್ರದೇಶದಲ್ಲಿ ಎಸೆದು ಪರಾರಿಯಾಗಿದ್ದಾರೆ.

ಇನ್ನು ಎಂದಿನಂತೆ ಬೆಳಗಿನ ಪೂಜೆಗೆ ದೇವಾಲಯಕ್ಕೆ ಅರ್ಚಕರು ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ನಂತರ ಬನ್ನೇರುಘಟ್ಟ ಪೊಲೀಸರಿಗೆ ವಿಷಯ ತಿಳಿಸಿ ಬನ್ನೇರುಘಟ್ಟ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಕಳ್ಳರ ಪತ್ತೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments