ಸಮಸ್ತ ಶೋಷಿತ ಸಮುದಾಯಗಳ ಮಹಾಸಂಸ್ಥಾನ ಆಗಬೇಕು ಎನ್ನುವ ಮಹಾ ಉದ್ದೇಶದಿಂದ ಕಾಗಿನೆಲೆ ಮಹಾಸಂಸ್ಥಾನವನ್ನು ಸ್ಥಾಪಿಸಲಾಗಿದೆ. ಆದ್ದರಿಂದ ಇದು ಕೇವಲ ಒಂದು ಜಾತಿ-ಸಮಾಜದ ಮಠ ಅಲ್ಲ. ಸರ್ವ ಶೋಷಿತ ಸಮಾಜಗಳಿಗೆ ಸೇರಿದ ಮಹಾ ಸಂಸ್ಥಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಶಾಖಾ ಮಠದ ಭೂಮಿ ಪೂಜೆಯನ್ನು ನೆರವೇರಿಸಿ ಮಾತನಾಡಿದರು.
ಶೋಷಿತ ಸಮುದಾಯಗಳಿಗೆ ಧ್ವನಿ ಆಗುವ ಉದ್ದೇಶದಿಂದ ರಾಜ್ಯಾದ್ಯಂತ ಪ್ರವಾಸ ಮಾಡಿ ಸಮುದಾಯವನ್ನು ಒಟ್ಟಾಗಿಸಿ ಕಾಗಿನೆಲೆ ಮಹಾಸಂಸ್ಥಾನಕ್ಕೆ ನಾಂದಿ ಹಾಡಲಾಯಿತು. ಮೊದಲ ಸ್ವಾಮೀಜಿ ತಾರಕಾನಂದಪುರಿ ಶ್ರೀಗಳ ಸಾನ್ನಿಧ್ಯದಲ್ಲಿ ಯಶಸ್ವಿಯಾಗಿ ಸಾಮಾಜಿಕ ಚಟುವಟಿಕೆ ಮಾಡಿಕೊಂಡು ಬರುತ್ತಿರುವ ಪೀಠ ಈಗ ನಿರಂಜನಾನಂದಪುರಿ ಶ್ರೀಗಳ ಸಾನ್ನಿಧ್ಯದಲ್ಲಿ ಸಮಾಜಮುಖಿಯಾಗಿ ನಡೆಯುತ್ತಿದೆ ಎಂದರು.