Select Your Language

Notifications

webdunia
webdunia
webdunia
webdunia

ಪ್ರಧಾನಿ ಮೋದಿ ಮೂರನೇ ಬಾರಿ ಪ್ರಧಾನಿಯಾಗುವ ಸಮಯ ಹತ್ತಿರವಾಗ್ತಿದೆ- ಕರಂದ್ಲಾಜೆ

ಪ್ರಧಾನಿ ಮೋದಿ ಮೂರನೇ ಬಾರಿ ಪ್ರಧಾನಿಯಾಗುವ ಸಮಯ ಹತ್ತಿರವಾಗ್ತಿದೆ- ಕರಂದ್ಲಾಜೆ
bangalore , ಶುಕ್ರವಾರ, 25 ಆಗಸ್ಟ್ 2023 (15:07 IST)
ನಗರದ ಬಿಜೆಪಿ ಕಛೇರಿಯಲ್ಲಿ ಮಾತನಾಡಿದ ಶೋಭಾ ಕರಂದ್ಲಾಜೆ ಯಶಸ್ವಿಯಾಗಿ ಚಂದ್ರಯಾನ ಸಾಧಿಸಿರುವ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ್ರು.ಕಳೆದ‌ ಬಾರಿ ಸ್ವತಃ ಪ್ರಧಾನಿ ಬೆಂಗಳೂರಿಗೆ ಬಂದಿದ್ದರು.ಅತ್ಯಂತ ಕಡಿಮೆ‌ ಸಮಯದಲ್ಲಿ ಚಂದ್ರಯಾನ-3 ರೂಪಿಸಲಾಗಿದೆ.ಚಂದ್ರನ ದಕ್ಷಿಣದಲ್ಲಿ ತಲುಪಿದ ಮೊದಲ ದೇಶ.ವಿಜ್ಞಾನಿಗಳನ್ನು ಪ್ರಧಾನಿ ಅಭಿನಂದಿಸಿದರು,ಹಣವನ್ನೂ ಕೊಟ್ಟರು ಎಂದು ಶೋಭಾ ಕರಂದ್ಲಾಜೆ ಹೇಳಿದ್ರು.
 
ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯಾಗುವ ಸಮಯ ಹತ್ತಿರವಾಗುತ್ತಿದೆ.ಭಾರತಕ್ಕೆ ಮಾತ್ರವಲ್ಲ, ವಿಶ್ವಕ್ಕೇ ನೇತೃತ್ವ ಬೇಕು ಎಂದು ವಿಶ್ವ ಬಯಸುತ್ತಿದೆ.ಅಂತಹ ಪ್ರಧಾನಿಯನ್ನು ಆಯ್ಕೆ ಮಾಡುವುದು ನಮ್ಮ ಜವಾಬ್ದಾರಿ.ಕಾಲೇಜು ವಿದ್ಯಾರ್ಥಿಗಳಿಗೆ ಮತದಾರರ ಪಟ್ಟಿಗೆ ಸೇರ್ಪಡೆ ಮಾಹಿತಿ ಇರುವುದಿಲ್ಲ.ಹೊಸ ಮತದಾರರ ಸೇರ್ಪಡೆ, ವಿಳಾಸ ಬದಲಾವಣೆ, ನಿಧನರಾದವರ ಹೆಸರು ಡಿಲೀಟ್.ನಕಲಿ ಮತದಾರರ ಗುರುತಿಸಬೇಕು.ಈ ಕಾರ್ಯವನ್ನು ಬಿಜೆಪಿ ಕೈಗೆತ್ತಿಕೊಂಡಿದೆ.ಗಡಿ ರಾಜ್ಯಗಳಲ್ಲಿ ನಕಲಿ ಮತದಾರರು ಪತ್ತೆಯಾಗಿದ್ದಾರೆ.ಮತದಾರರ ಹೆಸರನ್ನು ಕೈಬಿಡುವ ಕೆಲಸವೂ ನಡೆದಿತ್ತು.ಜಾತಿ ನೋಡಿ, ಹೆಸರು ನೋಡಿ ಹೆಸರು ತೆಗೆಯಲಾಗಿತ್ತು.ಸರಿಯಾದ ಮತದಾರರ ಪಟ್ಟಿ ತಯಾರಿಗೆ ಚುನಾವಣಾ ಆಯೋಗ ಕೆಲಸ ಮಾಡುತ್ತಿದೆ.ಆಯೋಗಕ್ಕೆ ಪೂರಕವಾಗಿ ಬಿಜೆಪಿ ಕೆಲಸ ಮಾಡುತ್ತದೆ.2024ರ ಚುನಾವಣೆಯಲ್ಲಿ ಯಾವುದೇ ಗೊಂದಲ ಆಗಬಾರದು ಎಂದು ಶೋಭಾ ಕರಂದ್ಲಾಜೆ ಹೇಳಿದ್ರು.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರು ಹಾಲು ಕರೆಯುವ ದನ ಎಂದ ಕರಂದ್ಲಾಜೆ