ನಾಲಿಗೆ ವ್ಯಕ್ತಿಯ ಸಂಸ್ಕ್ರತಿ ಹೇಳುತ್ತದೆ, ಪ್ರಧಾನಿ ಮೋದಿಯವರನ್ನು ಅವಹೇಳವಾಗಿ ಟೀಕಿಸಿದ ಸಚಿವ ರೋಷನ್ ಬೇಗ್ ದೇಶದ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
 
									
										
								
																	
	ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಚಿವ ರೋಷನ್ ಬೇಗ್, ಪ್ರಧಾನಿ ಮೋದಿಯವರನ್ನು ಅಸಭ್ಯ ಪದಗಳಿಂದ ಟೀಕಿಸಿರುವುದು ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದೆ.
 
									
			
			 
 			
 
 			
					
			        							
								
																	
	 
	ಪ್ರಕಟಣೆಯೊಂದನ್ನು ಹೊರಡಿಸಿರುವ ಬಿಎಸ್‌ವೈ, ಪ್ರಧಾನಿ ಮೋದಿ ಬಗ್ಗೆ ಸಚಿವ ರೋಷನ್ ಬೇಗ್ ಹೇಳಿಕೆ ಖಂಡನೀಯ.ಸಿಎಂ ಸಿದ್ದರಾಮಯ್ಯ ಕೂಡಲೇ ಬೇಗ್‌ರನ್ನು ಸಚಿವ ಸಂಪುಟದಿಂದ ಕೈ ಬಿಡಬೇಕು ಎಂದು ಒತ್ತಾಯಿಸಿದ್ದಾರೆ. 
 
									
										
								
																	
	 
	ನಕಲಿ ಛಾಪಾ ಕಾಗದ ಹಗರಣದಲ್ಲಿ ಸಚಿವ ರೋಷನ್ ಬೇಗ್ ಹೆಸರು ಕೇಳಿಬಂದಾಗ ಸಚಿವ ಸ್ಥಾನದಿಂದ ಕೈಬಿಡಲಾಗಿತ್ತು. ಅವರ ಕಟ್ಟಡಗಳಿಗೆ ಬೀಗಮುದ್ರೆ ಹಾಕಲಾಗಿತ್ತು. ಅಂತಹ ವ್ಯಕ್ತಿ ಪ್ರಧಾನಿ ಮೋದಿಯನ್ನು ಟೀಕಿಸುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕಿಡಿಕಾರಿದ್ದಾರೆ.  
 
									
											
							                     
							
							
			        							
								
																	
	
	ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ 
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.