ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣ ಹಿನ್ನೆಲೆ ಕೆ.ಎಸ್.ಈಶ್ವರಪ್ಪ ವಿರುದ್ಧ FIR ದಾಖಲಾಗಿದೆ. ಹೀಗಾಗಿ ಘಟನೆ ಬಗ್ಗೆ ಈಶ್ವರಪ್ಪ ಬಳಿ ಮಾತನಾಡಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಈ ಕುರಿತು ಈಶ್ವರಪ್ಪ ಜೊತೆ ಒನ್ ಟು ಒನ್ ಮಾತನಾಡುತ್ತೇನೆ. ಘಟನೆಯ ಬಗ್ಗೆ ಎಲ್ಲಾ ಮಾಹಿತಿ ಪಡೆಯುತ್ತೇನೆ ಎಂದ್ರು. ಸಿಎಂ ಹೇಳಿದರೆ ರಾಜೀನಾಮೆ ನೀಡುವ ಈಶ್ವರಪ್ಪ ಹೇಳಿಕೆ ಮತ್ತು ಈಶ್ವರಪ್ಪ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹಿಸುತ್ತಿರೋ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಿಎಂ ಈಶ್ವರಪ್ಪ ಹೇಳಿಕೆಯ ಬಗ್ಗೆ ಗೊತ್ತಿಲ್ಲ, ಅವರನ್ನು ಭೇಟಿಯಾಗುತ್ತೇನೆ. ವಿರೋಧ ಪಕ್ಷ ಕಾಂಗ್ರೆಸ್ ಇದರಲ್ಲಿ ತಪ್ಪು ಕಂಡುಹಿಡಿಯಲು ಪ್ರಯತ್ನ ಮಾಡುತ್ತಿದೆ..ತನಿಖೆಯಲ್ಲಿ ಸತ್ಯಾಂಶ ಗೊತ್ತಾಗಲಿದೆ. ತನಿಖೆಯಲ್ಲಿ ಯಾವುದೇ ಹಸ್ತಕ್ಷೇಪ ಮಾಡೋದಿಲ್ಲ ಎಂದು ಮಂಗಳೂರಿನಲ್ಲಿ CM ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.