Publish Date: Fri, 15 Apr 2022 (20:28 IST)
Updated Date: Fri, 15 Apr 2022 (20:32 IST)
ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರನ್ನು ಭದ್ರತಾಪಡೆಗಳು ಹೊಡೆದುರುಳಿಸಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಬಡಿಗಮ್, ಝೈನಾಪೋರಾದಲ್ಲಿ ಉಗ್ರಗಾಮಿಗಳ ಉಪಸ್ಥಿತಿಯ ಬಗ್ಗೆ ಮಾಹಿತಿ ಪಡೆದ ನಂತರ ಶೋಧ ಕಾರ್ಯಾಚರಣೆಯ ಸಮಯದಲ್ಲಿ ಗುಂಡಿನ ಕಾಳಗ ನಡೆದಿದೆ ಎಂದು ಅವರು ಹೇಳಿದ್ದಾರೆ.ಕುಲ್ಗಾಮ್ ಜಿಲ್ಲೆಯಲ್ಲಿ ಸ್ಥಳೀಯ ಅಲ್ಪಸಂಖ್ಯಾತ ಸದಸ್ಯ ಸತೀಶ್ ಕುಮಾರ್ ಸಿಂಗ್ ಅವರನ್ನು ಗುಂಡಿಕ್ಕಿ ಕೊಂದ ಒಂದು ದಿನದ ನಂತರ ಶೋಪಿಯಾನ್‌ನಲ್ಲಿ ಈ ಎನ್‌ಕೌಂಟರ್ ನಡೆದಿದೆ.