Publish Date: Fri, 22 Nov 2024 (18:24 IST)
Updated Date: Fri, 22 Nov 2024 (18:27 IST)
ಬೆಂಗಳೂರು: ಪ್ರತಿಪಕ್ಷಗಳ ಹೋರಾಟ ಮತ್ತು ಜನಾಕ್ರೋಶಕ್ಕೆ ಮಣಿದು ಬಿಪಿಎಲ್ ಕಾರ್ಡುಗಳನ್ನು ಏಕಾಏಕಿ ರದ್ದು ಮಾಡುವ ಪ್ರಕ್ರಿಯೆಗೆ ತಡೆ ನೀಡಿದೆ ಈ ಎಡಬಿಡಂಗಿ ಕಾಂಗ್ರೆಸ್ ಸರ್ಕಾರ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಆಕ್ರೋಶ ಹೊರಹಾಕಿದ್ದಾರೆ.
ಈ ಬಗ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯನವರೇ, ರದ್ದಾದ ಬಿಪಿಎಲ್ ಕಾರ್ಡುಗಳನ್ನು ವಾಪಸ್ಸು ಕೊಟ್ಟರೆ ಸಾಲದು. ಬಡವರಿಗೆ ವಂಚಿತವಾಗಿರುವ ರೇಷನ್ ಕೊಡಲೇ ವಿತರಣೆ ಮಾಡಬೇಕು. ಬಿಪಿಎಲ್ ಕಾರ್ಡುದಾರರಿಗೆ ಲಭ್ಯವಿರುವ ಆರೋಗ್ಯ ಸೇವೆ, ಗೃಹಲಕ್ಷ್ಮೀ ಹಣ ಸೇರಿದಂತೆ ಎಲ್ಲ ಸೌಲಭ್ಯಗಳನ್ನೂ ಮರುಸ್ಥಾಪಿಸಿ ಮಾಡಿ ಹಿಂದಿನ ಬಾಕಿ ಹಣ ಬಿಡುಗಡೆ ಮಾಡಬೇಕು.
ಈ ಕುರಿತಂತೆ ಸಂಬಂಧಪಟ್ಟ ಇಲಾಖೆಗಳಿಗೆ, ನ್ಯಾಯಬೆಲೆ ಅಂಗಡಿಗಳಿಗೆ ಯಾವುದೇ ಗೊಂದಲವಾಗದಂತೆ ಸ್ಪಷ್ಟವಾದ ಅಧಿಕೃತ ಸುತ್ತೋಲೆ ಹೊರಡಿಸಿ ಅಧಿಕಾರಿಗಳಿಗೆ ಕಟ್ಟುನಿಟ್ಟಾದ ಸೂಚನೆ ನೀಡಬೇಕು. ಯಾವುದೇ ಬಿಪಿಎಲ್ ಕಾರ್ಡುದರರು ಅವರ ಸೌಲಭ್ಯಗಳಿಂದ ವಂಚಿತರಾಗದಂತೆ ಖಾತ್ರಿ ಪಡಿಸಿಕೊಳ್ಳಬೇಕು.