Select Your Language

Notifications

webdunia
webdunia
webdunia
webdunia

ಸಾಲ ವಸೂಲಿಗೆ ಬಂದ ಅಧಿಕಾರಿಗಳನ್ನು ಕೂಡಿಹಾಕಿದ ಗ್ರಾಮಸ್ಥರು

ಸಾಲ ವಸೂಲಿಗೆ ಬಂದ ಅಧಿಕಾರಿಗಳನ್ನು ಕೂಡಿಹಾಕಿದ ಗ್ರಾಮಸ್ಥರು
ವಿಜಯಪುರ , ಶನಿವಾರ, 17 ಜೂನ್ 2017 (17:53 IST)
ಸಾಲ ವಸೂಲಿಗೆ ಬಂದ ಅಧಿಕಾರಿಗಳನ್ನು ಕೂಡಿಹಾಕಿದ ಗ್ರಾಮಸ್ಥರು ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರೈತರ ಸಾಲ ಮನ್ನಾ ಮಾಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
 
ವಿಜಯ ಬ್ಯಾಂಕ್ ಅಧಿಕಾರಿಗಳನ್ನು ಕೂಡಿಹಾಕಿದ ಗ್ರಾಮಸ್ಥರು ಸಾಲ ಮನ್ನಾ ಮಾಡುವಂತೆ ಪ್ರತಿಭಟನೆ ನಡೆಸಿದರು.ರೈತರು ಸಂಕಷ್ಟದಲ್ಲಿದ್ದರೂ ಸರಕಾರ ನೆರವಿಗೆ ಬರುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
 
ಪರಿಸ್ಥಿತಿ ಉದ್ರಿಕ್ತವಾಗುತ್ತಿರುವುದನ್ನು ಗಮನಿಸಿದ ಗ್ರಾಮದ ಮುಖಂಡರು ಮಧ್ಯಪ್ರವೇಶಿಸಿ ಬ್ಯಾಂಕ್ ಅಧಿಕಾರಿಗಳನ್ನು ಬಂಧನದಿಂದ ಮುಕ್ತಗೊಳಿಸಿ ಸುರಕ್ಷಿತವಾಗಿ ವಾಪಸ್ ಕಳಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ರಾಜ್ಯ ಸರಕಾರ ಕೂಡಲೇ ಮಧ್ಯಪ್ರವೇಶಿಸಿ ಸಹಕಾರ ಸಂಘಗಳಲ್ಲಿರುವ ರೈತರ ಸಾಲ ಮನ್ನಾ ಮಾಡಬೇಕು. ಇಲ್ಲವಾದಲ್ಲಿ ಮುಂಬರುವ ದಿನಗಳಲ್ಲಿ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಗ್ರಾಮಸ್ಥರು ಎಚ್ಚರಿಸಿದ್ದಾರೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಡಿ.ಕೆ.ಶಿವಕುಮಾರ್ ಅಭಿಮಾನ ಬಳಗದ ಮಾಜಿ ಅಧ್ಯಕ್ಷ ಅರೆಸ್ಟ್