Webdunia - Bharat's app for daily news and videos

Install App

40 ಪ್ರಕರಣದಲ್ಲಿ ಬೇಕಾಗಿದ್ದ ಆರೋಪಿ ಅರೆಸ್ಟ್

Webdunia
ಶನಿವಾರ, 20 ಆಗಸ್ಟ್ 2022 (19:03 IST)
ಬೆಂಗಳೂರಿನಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದ್ದು, ಪೊಲೀಸರು ನಿದ್ದೆಗೆಟ್ಟು ಕಳ್ಳರನ್ನು ಖೆಡ್ಡಾಗೆ ಕೆಡವಲು ತಯಾರಿ ನಡೆಸುತ್ತಲೇ ಇರುತ್ತಾರೆ. ಇದೀಗ 40 ಪ್ರಕರಣಗಳಲ್ಲಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಓಡಾಡುತ್ತಿದ್ದ ಖತರ್ನಾಕ್​​ ಕಳ್ಳರನ್ನು ಖಾಕಿ ಬಲೆಗೆ ಬೀಳಿಸಿದ್ದಾರೆ. ಜಾನ್ ಮೆಲ್ವಿನ್ ಬಂಧಿತ ಮನೆಗಳ್ಳನಾಗಿದ್ದಾನೆ. ಈತ ಜೈಲಿನಲ್ಲಿನ ಕೈದಿ ಜೊತೆ ಸೇರಿ ಮನೆಗಳ್ಳತನಕ್ಕೆ ಸ್ಕೆಚ್ ಹಾಕ್ತಿದ್ದ ಎಂಬ ಮಾಹಿತಿ ತನಿಖೆ ವೇಳೆ ತಿಳಿದು ಬಂದಿದೆ. ಬೆಂಗಳೂರಿನ ಜಯನಗರ ಪೊಲೀಸರು ಜಾನ್ ಮೆಲ್ವಿನ್​​​ನನ್ನು ಬಂಧಿಸಿದ್ದು, ಬರೋಬ್ಬರಿ 800 ಗ್ರಾಂ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಹಲವು ಪೊಲೀಸ್​​ ಠಾಣೆಗಳಲ್ಲಿ ಈತನ ವಿರುದ್ಧ ಹಲವಾರು ಪ್ರಕರಣಗಳು ದಾಖಲಾಗಿದ್ವು. ಇದೀಗ ಖದೀಮ ಅಂದರ್​ ಆಗಿದ್ದು, ಈತನ ಜೊತೆ ಯಾರೆಲ್ಲ ಸೇರಿ ಕಳ್ಳತನ ನಡೆಸ್ತಿದ್ರು ಹಾಗೂ ಯಾವೆಲ್ಲ ಪ್ರಕರಣಗಳಲ್ಲಿ ಈತನ ಕೈವಾಡವಿದೆ ಎಂಬ ಮಾಹಿತಿ ತನಿಖೆ ನಂತರವಷ್ಟೇ ಬೆಳಕಿಗೆ ಬರೆಬೇಕಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments