Select Your Language

Notifications

webdunia
webdunia
webdunia
webdunia

ತೀವ್ರ ಜ್ವರಕ್ಕೆ ಯೋಧ ಬಲಿ

The warrior
ದಾವಣಗೆರೆ , ಸೋಮವಾರ, 25 ಜೂನ್ 2018 (18:10 IST)
ದಾವಣಗೆರೆ: ತೀವ್ರ ಜ್ವರದಿಂದ ಬಳಲುತ್ತಿದ್ದ ಯೋಧರೊಬ್ಬರು ಸಾವನ್ನಪ್ಪಿದ್ದಾರೆ.

ಜಿಲ್ಲೆಯ ಚನ್ನಗಿರಿ ತಾಲೂಕಿನ ಹನಮಲಾಪುರ ಗ್ರಾಮದ ಹೊರವಲಯದಲ್ಲಿರುವ ಜೈಪುರ ತಾಂಡಾ ನಿವಾಸಿ ಜಗದೀಶ್ (24) ಸಾವನ್ನಪ್ಪಿದ ಯೋಧರಾಗಿದ್ದಾರೆ.

ಸಿಆರ್ ಪಿಎಫ್ ನಲ್ಲಿ ಸೇವೆ ಸಲ್ಲಿಸುತ್ತಿದ್ದ ಜಗದೀಶ್ ಕಳೆದ ಎರಡುದಿನಗಳಿಂದ ಅನಾರೋಗ್ಯದಿಂದ ನರಳುತ್ತಿದ್ದರು. ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಯೋಧ ಸಾವನ್ನಪ್ಪಿದ್ದಾರೆ.

ಮೃತ ಯೋಧ ಜಗದೀಶ್ ಕಳೆದ ಐದು ವರ್ಷಗಳಿಂದ ಆಸ್ಸಾಂ ಸಿಆರ್ ಪಿಎಫ್ ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಸಕಲ ಸರಕಾರಿ ಗೌರವಗಳೊಂದಿಗೆ ಯೋಧನ ಅಂತ್ಯಕ್ರಿಯೆ ನಡೆಸಲಾಯಿತು. 

Share this Story:

Follow Webdunia kannada

ಮುಂದಿನ ಸುದ್ದಿ

ಸಚಿವ ಜಮೀರ್ ಅಹ್ಮದ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‍ಗೆ ಲ್ಯಾಂಡಿಂಗ್ ಟ್ರಬಲ್