ಎಡೆಬಿಡದೆ ಸುರಿಯುತ್ತಿರುವ ಮಹಾ ಮಳೆಗೆ ಕೆಂಪೇಗೌಡ ಪಾರ್ಕ್ ನಲ್ಲಿ ಕೋಟೆಯ ಪಶ್ಚಿಮ ದಿಕ್ಕಿನ ಗೋಡೆ ಕುಸಿದಿದೆ. 3 ವರ್ಷಗಳ ಹಿಂದೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಗೋಡೆಯನ್ನ ನಿರ್ಮಿಸಲಾಯಿತು.
ಗೋಡೆ ಕುಸಿತ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ. ಗೋಡೆ ಸಡಿಲಗೊಂಡು ಮತ್ತಷ್ಟು ಬಾಯು ಬಯಲು ರಂಗಮಂದಿರಕ್ಕೆ ತೊಂದರೆಯಾಗುವುದು ಖಚಿತವಾಗಿದೆ.
ಬೆಂಗಳೂರಿನ ದಾಸರಹಳ್ಳಿ ಕ್ಷೇತ್ರದ ಮಲ್ಲಸಂದ್ರದಲ್ಲಿರುವ ಕೆಂಪೇಗೌಡ ಪಾರ್ಕ್ ನಲ್ಲಿ ಕಳಪೆ ಕಾಮಗಾರಿಯಿಂದ 25 ಅಡಿ ಎತ್ತರದ ಕೋಟೆಯ ಗೋಡೆ ಕುಸಿದಿದೆ.
7 ಏಕರೆ ಪ್ರದೇಶದಲ್ಲಿ ಕೆಂಪೇಗೌಡ ಬೃಹತ್ ಪಾರ್ಕ್ ನಿರ್ಮಿಸಲಾಗಿದೆ. ಪಾರ್ಕ್ ನಲ್ಲಿ ಆಡಿಟೋರಿಯಂ, ಪ್ರತಿಮೆಗಳು ಸಂಜೆ 24 ಕೋಟಿ ರೂಪಾಯಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳನ್ನು ಬಿಬಿಎಂಪಿ ಕೈಗೊಂಡಿದೆ.