Select Your Language

Notifications

webdunia
webdunia
webdunia
webdunia

ಇಡೀ ದೇಶ ಮಣಿಪುರದಂತೆ ಬದಲಾಗಲಿದೆ

Manipur
ಹರಿಯಾಣ , ಸೋಮವಾರ, 4 ಸೆಪ್ಟಂಬರ್ 2023 (19:43 IST)
ಹರಿಯಾಣದಲ್ಲಿ ಭುಗಿಲೆದ್ದಿರುವ ಕೋಮು ಹಿಂಸಾಚಾರದ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಕಿಡಿಕಾರಿದ್ದಾರೆ. INDIA ಮೈತ್ರಿಕೂಟ ಗೆಲ್ಲದಿದ್ದರೆ, ಇಡೀ ದೇಶ ಮಣಿಪುರ ಹಾಗೂ ಹರ್ಯಾಣ ರಾಜ್ಯದಂತೆ ಬದಲಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಎಂ.ಕೆ.ಸ್ಟಾಲಿನ್, ಕಳೆದ 9 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ತಾನು ಚುನಾವಣೆಗೂ ಮುಂಚೆ ನೀಡಿದ್ದ ಸಾಮಾಜಿಕ ಕಲ್ಯಾಣ ಕಾರ್ಯಕ್ರಮಗಳನ್ನು ಕುರಿತ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ ಎಂದು ಆರೋಪಿಸಿದ್ದಾರೆ. ಸಾರ್ವಜನಿಕ ಸಂಸ್ಥೆಗಳನ್ನು ಹಾಳುಗೆಡವಿ, ಅವುಗಳನ್ನು ಕಾರ್ಪೊರೇಟ್ ಉದ್ಯಮಿಗಳಿಗೆ ಹಸ್ತಾಂತರಿಸುತ್ತಿರುವ ವಿಷಯವನ್ನು ಮರೆಮಾಚಲು ಬಿಜೆಪಿಯು ಕೋಮುವಾದವನ್ನು ಮುನ್ನೆಲೆಗೆ ತರುತ್ತಿದೆ ಎಂದೂ ದೂರಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

2023-24ನೇ ಸಾಲಿನ BE ಶೈಕ್ಷಣಿಕ ವರ್ಷ ಪ್ರಾರಂಭ