Select Your Language

Notifications

webdunia
webdunia
webdunia
webdunia

ಆಸ್ತಿಯ ಆಸೆಗೆ ಬಿದ್ದು ಪತಿಗೆ ಉಪ್ಪಿಟ್ಟಿನಲ್ಲಿ ವಿಷ ಬೆರೆಸಿದ ಪತ್ನಿ!

ಆಸ್ತಿಯ ಆಸೆಗೆ ಬಿದ್ದು ಪತಿಗೆ ಉಪ್ಪಿಟ್ಟಿನಲ್ಲಿ ವಿಷ ಬೆರೆಸಿದ ಪತ್ನಿ!
ಬೆಳಗಾವಿ , ಭಾನುವಾರ, 20 ಆಗಸ್ಟ್ 2023 (10:20 IST)
ಬೆಳಗಾವಿ : ಪತಿಯ ಎರಡು ಎಕರೆ ಜಮೀನನ್ನು ತನ್ನ ಹೆಸರಿಗೆ ಮಾಡಿಕೊಳ್ಳುವ ಉದ್ದೇಶದಿಂದ ಮಹಿಳೆಯೊಬ್ಬಳು ಪತಿಗೆ ಉಪ್ಪಿಟ್ಟಿನಲ್ಲಿ ವಿಷ ಹಾಕಿ ಕೊಲೆಗೆ ಯತ್ನಿಸಿದ ಪ್ರಕರಣವನ್ನು ಸವದತ್ತಿಯ ಗೋರಾಬಾಳದಲ್ಲಿ ನಡೆದಿದೆ.

ಸಾವಕ್ಕ (32) ಎಂಬಾಕೆ ಪತಿಗೆ ಆ.11ರ ಬೆಳಗ್ಗೆ ಉಪ್ಪಿಟ್ಟು ಮಾಡಿಕೊಟ್ಟಿದ್ದಳು. ಉಪ್ಪಿಟ್ಟು ತಿಂದ ಬಳಿಕ ನಿಂಗಪ್ಪ ಹಮಾನಿ (35) ತೀವ್ರ ಹೊಟ್ಟೆ ನೋವಿನಿಂದ ಬಳಿದ್ದಾನೆ. ಬಳಿಕ ಆತನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ವಿಷ ಆಹಾರ ಸೇವಿಸಿರುವ ವಿಚಾರವನ್ನು ವೈದ್ಯರು ತಿಳಿಸಿದ್ದಾರೆ.

ನಿಂಗಪ್ಪನಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ. ಆತನಿಗೆ ನೀಡಿದ್ದ ಉಪ್ಪಿಟ್ಟನ್ನು ತಿಂದ ಒಂದು ನಾಯಿ ಮತ್ತು ಒಂದು ಬೆಕ್ಕು ಸತ್ತುಹೋಗಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ತಿಳಿಸಿದ್ದಾರೆ.

 

Share this Story:

Follow Webdunia kannada

ಮುಂದಿನ ಸುದ್ದಿ

9 ತಿಂಗಳ ಮಗುವಿನಲ್ಲಿ ಹಕ್ಕಿ ಜ್ವರ ಪತ್ತೆ!