ಆಹಾರ ಅರಸಿ ಬಂದ ಕಾಡಾನೆಗಳು ಹಾರೋಬೆಲೆ ಡ್ಯಾಂನಲ್ಲಿ ಮುಳುಗಿ ಸಾವು

Sampriya
ಭಾನುವಾರ, 9 ನವೆಂಬರ್ 2025 (17:51 IST)
Photo Credit X
ಬೆಂಗಳೂರು: ರಾಮನಗರದಲ್ಲಿ ಆಹಾರ ಅರಸಿ ಬಂದ ಕಾಡಾನೆಗಳು ಹಾರೋಬೆಲೆ ಡ್ಯಾಂನಲ್ಲಿ ಮುಳುಗಿ ಸಾವುಡ್ಯಾಂ ಹಿನ್ನೀರಿನಲ್ಲಿ ಮುಳುಗಿ 2 ಕಾಡಾನೆಗಳು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. 

ಈ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲೂಕಿನ ಸಾತನೂರು ಅರಣ್ಯ ವ್ಯಾಪ್ತಿಯ ಕೂನೂರು ಗ್ರಾಮದ ಬಳಿಯ ಅರ್ಕಾವತಿ ನದಿಯ ಹಾರೋಬೆಲೆ ಡ್ಯಾಂ ಹಿನ್ನೀರಿನಲ್ಲಿ  ನಡೆದಿದೆ. 

ಆಹಾರ ಅರಸಿ ನಾಡಿಗೆ ಬಂದಿದ್ದ ವೇಳೆ ಗಂಡಾನೆಗಳು ನದಿ ದಾಟುವಾಗ ಜೊಂಡಿಗೆ ಸಿಲುಕಿ ಮುಳುಗಿ ಮೃತಪಟ್ಟಿವೆ.

ಇನ್ನೂ ಸ್ಥಳೀಯ ನಿವಾಸಿಗಳ ಪ್ರಕಾರ, ಕಳೆದೊಂದು ವಾರದಿಂದ ಗ್ರಾಮದ ಸುತ್ತಮುತ್ತ ಏಳು ಗಂಡಾನೆಗಳು ಕಾಣಿಸಿಕೊಂಡಿದ್ದವು. ಹೀಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ಅವುಗಳನ್ನು ಕಾಡಿಗೆ ಹಿಮ್ಮೆಟ್ಟಿಸುವ ಕೆಲಸ ಮಾಡಿದ್ದರು. 

ಈ ವೇಳೆ ಹದಿನೈದರಿಂದ ಇಪತ್ತು ವರ್ಷ ವಯಸ್ಸಿನ ಎರಡು ಗಂಡಾನೆಗಳು ನದಿ ದಾಟಲು ಹೋಗಿ ಜೊಂಡು (ಜಲಸಸ್ಯ) ಸಿಲುಕಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿವೆ ಎಂದು ತಿಳಿದುಬಂದಿದೆ.

ಸಾವನ್ನಪ್ಪಿರುವ ಕಾಡಾನೆಗಳನ್ನು ಸಿಬ್ಬಂದಿ ನದಿಯಿಂದ ಹೊರಕ್ಕೆ ತಂದಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಮರಣೋತ್ತರ ಪರೀಕ್ಷೆ ಬಳಿಕ ಅಂತ್ಯಸಂಸ್ಕಾರ ನಡೆಸಲಿದ್ದಾರೆ. ಸದ್ಯ ಸ್ಥಳದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಮೊಕ್ಕಾಂ ಹೂಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಲೆನಾಡು ಜನರ ಪ್ರೀತಿಯ ಕಾಡಾನೆ ಭೀಮಾನಿಗೆ ಹೀಗಾಗುದಾ

ಮುಸ್ಲಿಮರು, ಕ್ರಿಶ್ಚಿಯನ್ನರು ಆರ್‌ಎಸ್‌ಎಸ್‌ ಸೇರಬಹುದಾ ಪ್ರಶ್ನೆಗೆ ಮೋಹನ್ ಭಾಗವತ್ ಉತ್ತರ ಹೀಗಿದೆ

ಹಾಸಿಗೆಗಾಗಿ ದರ್ಶನ್‌ ಕೋರ್ಟ್‌ಗೆ ಹೋಗುವಾಗ ಕೆಲ ಕೈದಿಗಳಿಗೆ ರಾಜಾತಿಥ್ಯ: ಕೆರಳಿ ಕೆಂಡವಾದ ಪರಮೇಶ್ವರ್‌

ಕರ್ನಾಟಕಕ್ಕೆ ಮೊದಲ ಬಾರಿ ಭೇಟಿ ನೀಡಿದ ಉಪರಾಷ್ಟ್ರಪತಿ ರಾಧಾಕೃಷ್ಣನ್‌ಗೆ ಅದ್ಧೂರಿ ಸ್ವಾಗತ

ಮೂರು ಜನರ ಸಾವಿಗೆ ಕಾರಣವಾಗಿದ್ದ ನರಹಂತಕ ಹುಲಿ ಕೊನೆಗೂ ಸೆರೆ: ಡಿಎನ್‌ಎ ಪರೀಕ್ಷೆಗೆ ಸೂಚನೆ

ಮುಂದಿನ ಸುದ್ದಿ
Show comments