Publish Date: Tue, 23 Jan 2018 (14:06 IST)
Updated Date: Tue, 23 Jan 2018 (14:08 IST)
ಥೂ..ಥೂ..ಥೂ ನಾ ಕಂಡ ಅತ್ಯಂತ ಕೆಟ್ಟ ಸರ್ಕಾರ ಇದು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಗುಡುಗಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರಕ್ಕೆ ಅವಕಾಶ ನೀಡಲಿಲ್ಲ ಎನ್ನುವ ಕಾರಣಕ್ಕೆ ಜಿಲ್ಲಾಧಿಕಾರಿ ರೋಹಿಣಿ ಸಿಂಧು ಅವರನ್ನು ವರ್ಗಾವಣೆ ಮಾಡಿರುವ ಆರೋಪ ಎದುರಿಸುತ್ತಿರುವ ಸರಕಾರಕ್ಕೆ ನಾಚಿಕೆಯಾಗಬೇಕು ಎಂದು ಕಿಡಿಕಾರಿದ್ದಾರೆ.
ಮಹಾಮಸ್ತಾಕಾಭೀಷೇಕ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಹಣ ಲೂಟಿ ಮಾಡಲು ಕಾಂಗ್ರೆಸ್ ಕಾರ್ಯಕರ್ತರಿಗೆ ಅವಕಾಶ ನೀಡಲಿಲ್ಲ. ಕಾರ್ಯಕರ್ತರ ಒತ್ತಡದ ಮೇರೆಗೆ ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜು ಸಿಎಂ ಸಿದ್ದರಾಮಯ್ಯ ಮೇಲೆ ಒತ್ತಡ ತಂದು ವರ್ಗ ಮಾಡಿಸಿದ್ದಾರೆ ಎನ್ನುವ ಆರೋಪಗಳು ಕೇಳಿಬರುತ್ತಿವೆ.
ಮಾಜಿ ಪ್ರಧಾನಿಯೊಬ್ಬರ ಜಿಲ್ಲೆಯಲ್ಲಿ ಇಂತಹ ವರ್ಗಾವಣೆ ನಡೆಯುತ್ತಿರುವುದು ನಿಜವಾಗಿಯೂ ವಿಷಾದದ ಸಂಗತಿಯಾಗಿದೆ. ಸರಕಾರ ಇಂತಹ ಕೀಳುಮಟ್ಟಕ್ಕೆ ಇಳಿಯಬಾರದಾಗಿತ್ತು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಬೇಸರ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.