ಪಾದಯಾತ್ರೆ ಹೊರಟಿದ್ದ ಯುವಕ ನಾಪತ್ತೆ! ಹುಡುಕಿಕೊಟ್ಟವರಿಗೆ ನಗದು ಬಹುಮಾನ

Webdunia
ಸೋಮವಾರ, 20 ಫೆಬ್ರವರಿ 2023 (09:00 IST)
ಚಿಕ್ಕಮಗಳೂರು : ಧರ್ಮಸ್ಥಳಕ್ಕೆ ಪಾದಯಾತ್ರೆ ಹೊರಟಿದ್ದ ಯುವಕನೊಬ್ಬ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಾಪತ್ತೆಯಾಗಿದ್ದು, ಆತನನ್ನು ಹುಡುಕಿಕೊಟ್ಟವರಿಗೆ 5,000 ರೂ. ಬಹುಮಾನ ನೀಡುತ್ತೇವೆ ಎಂದು ಆತನ ಪೋಷಕರು ಹೇಳಿದ್ದಾರೆ.

ನಾಪತ್ತೆಯಾದ ಯುವಕನ ಪೋಷಕರು ಮಗನಿಗಾಗಿ ಚಾರ್ಮಾಡಿಘಾಟ್, ಕೊಟ್ಟಿಗೆಹಾರ, ಬಣಕಲ್ ಸೇರಿದಂತೆ ಹಲವೆಡೆ ತೀವ್ರ ಹುಡುಕಾಟ ನಡೆಸಿದ್ದಾರೆ. ಆ ದಾರಿಯಾಗಿ ಸಂಚರಿಸುವ ವಾಹನಗಳನ್ನು ತಪಾಸಣೆ ಮಾಡಿದ್ದಾರೆ. ಸರ್ಕಾರಿ ಬಸ್ಗಳಲ್ಲೂ ಹುಡುಕಾಟ ನಡೆಸಿದ್ದಾರೆ. ಆದರೆ ಯುವಕ ಮಾತ್ರ ಪತ್ತೆಯಾಗಿಲ್ಲ.

ನಾಪತ್ತೆಯಾಗಿರುವ ಯುವಕನನ್ನು ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಗಂಡಸಿ ಸಮೀಪದ ತಿಮ್ಲಾಪುರ ಗ್ರಾಮದ ಲವ (22) ಎಂದು ಗುರುತಿಸಲಾಗಿದೆ. ಯುವಕ ಲವ ಸ್ವಲ್ಪ ಬುದ್ಧಿಮಾಂದ್ಯನಾಗಿದ್ದಾನೆ. ಆದರೂ ಆತನಿಗೆ ಒಂದಷ್ಟು ಜ್ಞಾನವಿದೆ, ಒಳ್ಳೆಯದು-ಕೆಟ್ಟದರ ಬಗ್ಗೆ ಅರಿವಿದೆ ಎಂದು ಪೋಷಕರು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈ ಒಂದು ಕಾರಣಕ್ಕೆ ಸಿದ್ದರಾಮಯ್ಯ ಮೇಲೆ ರಾಹುಲ್ ಗಾಂಧಿಗೆ ಹೆಚ್ಚು ಒಲವು

ಪ್ರಿಯಕರನ ಜೊತೆ ಸೇರಿ ಗಂಡನ ಕೊಂದು ಡ್ರಮ್ ನಲ್ಲಿರಿಸಿದ್ದ ಮುಸ್ಕಾನ್ ಕತೆ ಏನಾಗಿದೆ ನೋಡಿ

ಯಡಿಯೂರಪ್ಪ ಅಂದೇ ಡಿಕೆ ಶಿವಕುಮಾರ್ ಭವಿಷ್ಯ ನುಡಿದಿದ್ದರು

ಅಯೋಧ್ಯೆಯಲ್ಲಿ ರಾರಾಜಿಸಲಿದೆ ರಘುವಂಶದ ಕೇಸರಿ ಧ್ವಜ: ಪ್ರಧಾನಿ ಮೋದಿ ಚಾಲನೆ

ರಾಜ್ಯದ ಸಿಎಂ ಕುರ್ಚಿ ಫೈಟ್ ಪರಿಹಾರಕ್ಕೆ ಈ ಒಂದು ಮೀಟಿಂಗ್ ಮೇಲೇ ಎಲ್ಲರ ಕಣ್ಣು

ಮುಂದಿನ ಸುದ್ದಿ
Show comments