Select Your Language

Notifications

webdunia
webdunia
webdunia
webdunia

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ
ಶಿವಮೊಗ್ಗ , ಸೋಮವಾರ, 1 ಜನವರಿ 2024 (19:41 IST)
ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಸೀಗೆಬಾಗಿ ಗ್ರಾಮದ ಬಳಿ‌ ನಡೆದಿದೆ. ರಮೇಶ್, ಚೇತನ್ ಮೃತ ದುರ್ದೈವಿಗಳು. ಹೊನ್ನವಿಲೆ ಗ್ರಾಮದ ನಿವಾಸಿಗಳಾದ ರಮೇಶ್ ಮತ್ತು ಚೇತನ್ ರವಿವಾರ ರಾತ್ರಿ ಹುಟ್ಟುಹಬ್ಬ ಆಚರಿಸಿಕೊಳ್ಳಲು ಬೈಕ್​​ನಲ್ಲಿ ಭದ್ರಾವತಿಗೆ ತೆರಳುತ್ತಿದ್ದರು.

ಸೀಗೆಬಾಗಿ ಗ್ರಾಮದ ಬಳಿ‌ ಬೊಲೆರೊ ವಾಹನ ಬೈಕ್​​ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೊಲೆರೊ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು,, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ