Select Your Language

Notifications

webdunia
webdunia
webdunia
webdunia

ಕರ್ನಾಟಕದ ಈ ಜಿಲ್ಲೆಯಲ್ಲಿದ್ದಾರೆ 10 ಜನ ಕೊರೊನಾ ಪೀಡಿತರು

ಕರ್ನಾಟಕದ ಈ ಜಿಲ್ಲೆಯಲ್ಲಿದ್ದಾರೆ 10 ಜನ ಕೊರೊನಾ ಪೀಡಿತರು
ಚಿಕ್ಕಬಳ್ಳಾಪುರ , ಮಂಗಳವಾರ, 31 ಮಾರ್ಚ್ 2020 (18:53 IST)
40 ವರ್ಷದ ಮಹಿಳೆಯೊಬ್ಬರಲ್ಲಿ ಕೋವಿಡ್ -19 ಸೋಂಕು ಇರೋದು ದೃಢಪಡುತ್ತಿದ್ದಂತೆ ಕೊರೊನಾ ವೈರಸ್ ಪೀಡಿತರ ಸಂಖ್ಯೆ 10 ಕ್ಕೆ ಏರಿಕೆಯಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನ 40 ವರ್ಷದ ಮಹಿಳೆಯಲ್ಲಿ ಕೋವಿಡ್‌–19 ಸೋಂಕು ಇರುವುದು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್‌ ಸೋಂಕಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

ಮೆಕ್ಕಾ ಯಾತ್ರೆ ಕೈಗೊಂಡ ಗೌರಿಬಿದನೂರಿನ ನಾಲ್ಕು ಜನರಲ್ಲಿ ಆರಂಭದಲ್ಲಿ ಕೋವಿಡ್‌ ಪತ್ತೆಯಾಗಿತ್ತು. ಈ ಪೈಕಿ 72 ವರ್ಷದ ವೃದ್ಧೆಯೊಬ್ಬರು ಮಾರ್ಚ್‌ 25 ರಂದು ಮೃತಪಟ್ಟಿದ್ದರು. ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದವರ ಪೈಕಿ ಈವರೆಗೆ ಆರು ಜನರಲ್ಲಿ ಸೋಂಕಿರುವುದು ದೃಢಪಟ್ಟಿದೆ.

ಸೋಂಕಿತರ ಪೈಕಿ ಸದ್ಯ ತಲಾ ಐದು ಜನರು ಬೆಂಗಳೂರಿನ ರಾಜೀವ್‌ ಗಾಂಧಿ ಎದೆರೋಗ ಸಂಸ್ಥೆಯಲ್ಲಿ ಮತ್ತು ಚಿಕ್ಕಬಳ್ಳಾಪುರದ ಕೋವಿಡ್‌ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ದೇಶದಲ್ಲಿ ಕೊರೊನಾಗೆ ಮೊದಲ ಬಲಿಯಾದವನ ಮಗಳು ಆಸ್ಪತ್ರೆಯಿಂದ ಬಿಡುಗಡೆ