Select Your Language

Notifications

webdunia
webdunia
webdunia
webdunia

ಪೌರಕಾರ್ಮಿಕರ ಸಮಸ್ಯೆಗಳ ಬಗ್ಗೆ ಎಲ್ಲ ರೀತಿಯ ಚರ್ಚೆ ನಡೆದಿದೆ -ಸಿಎಂ

There has been all kinds of discussion about the problems of civil servants
bangalore , ಶನಿವಾರ, 2 ಜುಲೈ 2022 (19:49 IST)
ಪೌರಕಾರ್ಮಿಕರ ಸಮಸ್ಯೆಗಳ ಬಗ್ಗೆ ಎಲ್ಲ ರೀತಿಯ ಚರ್ಚೆ ನಡೆದಿದ್ದು, ಇಂದು ಮುಷ್ಕರ ಹಿಂಪಡೆಯುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಳ್ಳಲು ಹೈದರಾಬಾದ್ಗೆ ತೆರಳುವ ಮುನ್ನ ಆರ್.ಟಿ ನಗರ ನಿವಾಸದ ಬಳಿ ಮಾತನಾಡಿದ ಸಿಎಂ, ಇಂದು ಮುಷ್ಕರ ಹಿಂಪಡೆಯುತ್ತಾರೆ. ಸಹಾನುಭೂತಿಯಿಂದ, ಮಾನವೀಯತೆಯಿಂದ ಕ್ರಮ ತೆಗೆದುಕೊಂಡು ಕಾನೂನು ಮಾಡಬೇಕೆಂದು ಕೊಂಡಿದ್ದೇವೆ. ಮೂರು ತಿಂಗಳಲ್ಲಿ ಯಾವ ರೀತಿ ನೇಮಕಾತಿ ಮಾಡಬೇಕು ಅನ್ನೋ ಬಗ್ಗೆ ಚರ್ಚೆ ಮಾಡಿದ್ದೇವೆ. ಯಾರ್ಯಾರಿಗೆ ನೇರ ಪಾವತಿ ಇದೆಯೋ ಅಂತಹವರನ್ನು ನೇಮಕಾತಿ ಮಾಡಲು ಒಪ್ಪಿಕೊಂಡಿದ್ದೇವೆ ಎಂದು ಸ್ಪಷ್ಟಪಡಿಸಿದರು. ಈ ಕ್ರಮಕ್ಕೆ ಲೀಗಲ್ ಮತ್ತು ಟೆಕ್ನಿಕಲ್ ಆಗಿ ಏನು ಮಾಡಬೇಕು ಅನ್ನೋ ಬಗ್ಗೆ ಪೌರ ಕಾರ್ಮಿಕರು ಮತ್ತು ಅಧಿಕಾರಿಗಳ ಜಂಟಿ ಸಮಿತಿ ಮಾಡಿದ್ದೇವೆ. ಪೌರಕಾರ್ಮಿಕರ ಸಂರಕ್ಷಣೆಗಾಗಿ ಹೆಲ್ತ್, ಎಜುಕೇಷನ್ ಬಗ್ಗೆ ಹೊಸ ಕಾನೂನನ್ನು ರಚನೆ ಮಾಡಬೇಕು. ಮುಂದಿನ ಅಧಿವೇಶನದಲ್ಲಿ ಈ ವಿಚಾರವನ್ನು ಪ್ರಸ್ತಾಪ ಮಾಡುತ್ತೇನೆ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಪೌರ ಕಾರ್ಮಿಕರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಜಮೀರ್ ಅಹ್ಮದ್