Select Your Language

Notifications

webdunia
webdunia
webdunia
webdunia

ಕರಾವಳಿ, ಮಲೆನಾಡಿನಲ್ಲಿ ಇಂದು ಸಾಧಾರಣ ಮಳೆ ಸಾಧ್ಯತೆ

ಕರಾವಳಿ, ಮಲೆನಾಡಿನಲ್ಲಿ ಇಂದು ಸಾಧಾರಣ ಮಳೆ ಸಾಧ್ಯತೆ

Sampriya

ಬೆಂಗಳೂರು , ಬುಧವಾರ, 18 ಸೆಪ್ಟಂಬರ್ 2024 (14:14 IST)
ಬೆಂಗಳೂರು: ಇಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ನೈರುತ್ಯ ಮುಂಗಾರು ಕರಾವಳಿ ಕರ್ನಾಟಕದಲ್ಲಿ ಸಾಮಾನ್ಯವಾಗಿದ್ದರೆ, ಒಳನಾಡಿನಲ್ಲಿ ದುರ್ಬಲಗೊಂಡಿದೆ.  ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಕಲಬುರಗಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಲಿದೆ.

ಉಳಿದಂತೆ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಮುಖ್ಯವಾಗಿ ಶುಷ್ಕ ಹವಾಮಾನ ಇರಲಿದೆ.

ಬೆಂಗಳೂರು ನಗರ ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಭಾಗಶಃ ಮೋಡ ಕವಿದ ಆಕಾಶ ಇರಲಿದೆ. ಒಣ ಹವಾಮಾನ ಮುಂದುವರಿಯಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಮತ್ತು 20 ಡಿ.ಸೆ ಇರಲಿದೆ ಎಂದು ತಿಳಿಸಿದೆ.

ಪುತ್ತೂರು ಎಚ್‌ಎಂಎಸ್, ಕೋಟ, ಹಣಂಬೂರು ವೀಕ್ಷಣಾಲಯ, ಗೋಕರ್ಣ, ಅಂಕೋಲಾ, ಕಾರ್ಕಳದಲ್ಲಿ ತಲಾ 3 ಸೆಂ.ಮೀ ಮಳೆಯಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಸೀದಿ ಮುಂದೆ ಗಣೇಶ ಮೂರ್ತಿ ಮೆರವಣಿಗೆ ಮಾಡಬೇಡಿ ಎಂದ ಪೊಲೀಸರು: ರಸ್ತೆಯಲ್ಲೇ ಅನಾಥವಾದ ಗಣೇಶ