ಬೆಂಗಳೂರು : ಜುಲೈ ತಿಂಗಳಿನಲ್ಲಿ ಅತಿ ಹೆಚ್ಚು ಕೊರೊನಾ ವೈರಸ್ ಹರಡುವ ಸೂಚನೆ ಇದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದೇಶಗಳಲ್ಲಿ ಒಂದೆರಡು ತಿಂಗಳಲ್ಲೇ ಸ್ಪೈಕ್ ಬಂದಿತ್ತು , ನಮ್ಮ ದೇಶದಲ್ಲಿ 5 ತಿಂಗಳಾದರೂ ಸ್ಪೈಕ್ ಬಂದಿಲ್ಲ. ನಮ್ಮ ಸರ್ಕಾರ ತೆಗೆದುಕೊಂಡ ನಿರ್ಧಾರಗಳಿಂದ ಕೊರೊನಾ ಕಂಟ್ರೋಲ್ ನಲ್ಲಿದೆ. ಆದರೆ ನಿಜವಾದ ಕೊರೊನಾ ಸ್ಪೈಕ್ ಜುಲೈನಲ್ಲಿ ಬರಬಹುದು ಎಂದು ಪರಿಣತರು ಹೇಳಿದ್ದಾರೆ. ಆದಕಾರಣ ಅದಕ್ಕಾಗಿ ಈಗಾಗಲೇ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.