Select Your Language

Notifications

webdunia
webdunia
webdunia
Friday, 11 April 2025
webdunia

ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸುವ ಉದ್ದೇಶವಿದೆ: ಸಿಎಂ ಸಿದ್ದರಾಮಯ್ಯ

Kalyana Karnataka, Chief Minister Siddaramaiah, North Karnataka,

Sampriya

ಕಲಬುರಗಿ , ಭಾನುವಾರ, 22 ಡಿಸೆಂಬರ್ 2024 (13:07 IST)
ಕಲಬುರಗಿ: ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸುವ ಉದ್ದೇಶವಿದ್ದು, ಉತ್ತರ ಕರ್ನಾಟಕ ವಿಮೋಚನಾ ದಿನದಂದೇ ಈ ಬಗ್ಗೆ ಹೇಳಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುನರುಚ್ಚರಿಸಿದರು.

ನಗರದಲ್ಲಿ ಭಾನುವಾರ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ಬಹಳ ವರ್ಷಗಳಿಂದ ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಬೇಕು ಎನ್ನುವ ಬೇಡಿಕೆ ಇದೆ. ಪ್ರತ್ಯೇಕ ಸಚಿವಾಲಯ ಮಾಡುವ ಉದ್ದೇಶ ನಮಗೆ ಇದೆ ಎಂದರು.

ತೊಗರಿಗೆ ಪ್ರತ್ಯೇಕ ಪ್ಯಾಕೇಜ್ ಘೋಷಿಸುವಂತೆ ರೈತರು ಬೇಡಿಕೆ ಇಟ್ಟಿದ್ದಾರೆ. ತೊಗರಿ ಬೆಳೆಯ ಸ್ಥಿತಿ ಗತಿ ಕುರಿತ ವರದಿ ಕೇಳಿದ್ದೇವೆ. ಈ ವರದಿ ಬಂದ ಬಳಿಕ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಕಲ್ಯಾಣ ಕರ್ನಾಟಕದ ಆರೋಗ್ಯ ವ್ಯವಸ್ಥೆಯಲ್ಲಿ ಜಯದೇವ ಆಸ್ಪತ್ರೆ ಮಹತ್ವದ್ದು. ರಾಜ್ಯ ಸಭೆ ಪ್ರತಿಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಹೋರಾಟದ ಫಲವಾಗಿ 371 ಜೆ ಜಾರಿಯಾಗಿದೆ. 371 ಬೆಡ್‌ಗಳ ಆಸ್ಪತ್ರೆಯನ್ನು ಉದ್ಘಾಟಿಸುತ್ತಿದ್ದೇವೆ ಎಂದರು.


Share this Story:

Follow Webdunia kannada

ಮುಂದಿನ ಸುದ್ದಿ

ಜಾಮೀನು ಪಡೆದು ಹೊರಬಂದ ಬೆನ್ನಲ್ಲೇ ಸಿಟಿ ರವಿ ಟೆಂಪಲ್ ರನ್