Select Your Language

Notifications

webdunia
webdunia
webdunia
webdunia

ಆರ್‌ಎಸ್ಎಸ್ ಕಾರ್ಯಕರ್ತರ ಮೇಲೆ ನಿರಂತರ ದಾಳಿ: ಸುರೇಶ್ ಕುಮಾರ್ ಆಕ್ರೋಶ

ಆರ್‌ಎಸ್ಎಸ್ ಕಾರ್ಯಕರ್ತರ ಮೇಲೆ ನಿರಂತರ ದಾಳಿ: ಸುರೇಶ್ ಕುಮಾರ್ ಆಕ್ರೋಶ
ಬೆಂಗಳೂರು , ಸೋಮವಾರ, 17 ಅಕ್ಟೋಬರ್ 2016 (12:03 IST)
ಆರ್‌ಎಸ್‌ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಎಸ್ಎಸ್ ಕಾರ್ಯಕರ್ತರ ಮೇಲೆ ನಿರಂತರ ದಾಳಿ ನಡೆಯುತ್ತಿದೆ ಎಂದು ಮಾಜಿ ಸಚಿವ ಸುರೇಶ್ ಕುಮಾರ್ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್‌ಎಸ್ಎಸ್ ಕಾರ್ಯಕರ್ತರ ಮೇಲೆ ಅಪರಿಚಿತರು ನಿರಂತರವಾಗಿ ದಾಳಿ ನಡೆಸುತ್ತಿದ್ದಾರೆ. ನಿನ್ನೆ ಮಧ್ಯಾಹ್ನ ಆರ್‌ಎಸ್‌ಎಸ್ ಕಾರ್ಯಕರ್ತ ರುದ್ರೇಶ್ ಅವರನ್ನು ದುಷ್ಕರ್ಮಿಗಳು ಭೀಕರವಾಗಿ ಹತ್ಯೆಗೈದಿದ್ದಾರೆ. ಘಟನೆ ನಡೆದ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳಿವೆ. ಆದರೂ ಆರೋಪಿಗಳನ್ನು ಬಂಧಿಸುವಲ್ಲಿ ತಡ ಮಾಡುತ್ತಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ ಎಂದು ದೂರಿದರು.
 
ಆರ್‌ಎಸ್‌ಎಸ್ ಹಾಗೂ ಬಿಜೆಪಿ ಕಾರ್ಯಕರ್ತ ರುದ್ರೇಶ್ (35) ಕೊಲೆ ಪ್ರಕರಣ ತ್ರೀವ್ರಸ್ವರೂಪ ಪಡೆದುಕೊಂಡಿದ್ದು, ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಆರ್‌ಎಸ್‌ಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ಇಂದು ಶಿವಾಜಿನಗರ ಬಂದ್‌ಗೆ ಕರೆ ನೀಡಿದ್ದು, ಉಗ್ರ ಪ್ರತಿಭಟನೆ ನಡೆಸುತ್ತಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಇಂದು 'ಕೈ'ಗೆ ಬೈಬೈ ಹೇಳಲಿರುವ ವಿ.ಶ್ರೀನಿವಾಸ್ ಪ್ರಸಾದ್!