Publish Date: Thu, 17 Nov 2022 (09:45 IST)
Updated Date: Thu, 17 Nov 2022 (09:33 IST)
ಧಾರವಾಡ : ಬೆಳಗಾವಿಯಲ್ಲೇ 10 ದಿನ ಚಳಿಗಾಲದ ಅಧಿವೇಶನ ನಡೆಸುವ ಬಗ್ಗೆ ಚರ್ಚೆ ಮಾಡಲಾಗಿದ್ದು, ಅಂತಿಮವಾಗಿ ಕ್ಯಾಬಿನೆಟ್ ನಿಗದಿಪಡಿಸಿದ ದಿನಗಳವರೆಗೆ ಅಧಿವೇಶನ ನಡೆಸಲಾಗುವುದು ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.
ಧಾರವಾಡದಲ್ಲಿ ಮಾತನಾಡಿದ ಅವರು, ಅಧಿವೇಶನದ ದಿನಾಂಕದ ಬಗ್ಗೆ ಚರ್ಚೆಯಾಗಿದೆ. ಕ್ಯಾಬಿನೆಟ್ನಲ್ಲಿ ಸಿಎಂ ನಿರ್ಧರಿಸಿ ಹೇಳಬೇಕಿದೆ.
ಅದಕ್ಕಾಗಿ ನಾವೂ ಕಾಯುತ್ತಿದ್ದೇವೆ. 10 ದಿನ ಅಧಿವೇಶನ ಮಾಡಬಹುದು ಎಂದು ಚರ್ಚೆ ಮಾಡಲಾಗಿದೆ ಎಂದಿದ್ದಾರೆ.