Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಮಳೆ ಸುರಿಯುವುದಕ್ಕಿಂತ ಹೆಚ್ಚಾಗಿ ಕೊಲೆ ನಡೆಯುತ್ತಿದೆ: ಆರ್‌ ಅಶೋಕ್ ಆಕ್ರೋಶ

Congress Government

Sampriya

ಬೆಂಗಳೂರು , ಭಾನುವಾರ, 19 ಮೇ 2024 (18:09 IST)
Photo Courtesy X
ಬೆಂಗಳೂರು: ಮಳೆ ಸುರಿಯುವುದಕ್ಕಿಂತ ಹೆಚ್ಚಾಗಿ ರಾಜ್ಯದಲ್ಲಿ ಕೊಲೆ, ಕಳ್ಳತನ, ದರೋಡೆ ನಡೆಯುತ್ತಿದೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.

ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರ ಭೇಟಿಯ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದ ಅವರು, ಸಚಿವ ಜಿ.ಪರಮೇಶ್ವರ ಅವರ ಕೈಯಲ್ಲಿ ಗೃಹ ಇಲಾಖೆ ಇಲ್ಲ. ಇದನ್ನು ಬೇರೆ ಯಾರೋ ಹೈಜಾಕ್‌ ಮಾಡಿದ್ದಾರೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ  ರೌಡಿಗಳಿಗೆ, ಕೊಲೆಗಡುಕರಿಗೆ ಹಬ್ಬ. ಈಚೆಗೆ ಹುಬ್ಬಳ್ಳಿಯಲ್ಲಿ ಹತ್ಯೆಗೀಡಾದ ಅಂಜಲಿ ಪ್ರಕರಣದಲ್ಲಿ ಕೊಲೆಗಾರನನ್ನು ಗಲ್ಲಿಗೇರಿಸುವಂತೆ ಕುಟುಂಬದವರು ಒತ್ತಾಯಿಸಿದ್ದಾರೆ. ಆದರೆ ರಾಜ್ಯದ ಕಾಂಗ್ರೆಸ್ ಸರ್ಕಾರವೇ ಅಪರಾಧಿ ಸ್ಥಾನದಲ್ಲಿದ್ದು, ಸರ್ಕಾರವನ್ನೇ ಗಲ್ಲಿಗೇರಿಸಬೇಕು ಎಂದು ಕಿಡಿಕಾರಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಪೆನ್‌ಡ್ರೈವ್‌ ಹಂಚಿಕೆ ವಿಚಾರದಲ್ಲಿ ನನ್ನ ಪಾತ್ರವಿಲ್ಲ: ಶಿವರಾಮೇಗೌಡ ಸ್ಪಷ್ಟನೆ