Select Your Language

Notifications

webdunia
webdunia
webdunia
webdunia

ಮದ್ಯ ಖರೀದಿಗೆ ವಯಸ್ಸು ಇಳಿಕೆ ಇಲ್ಲ : ಗೋಪಾಲಯ್ಯ

ಮದ್ಯ ಖರೀದಿಗೆ ವಯಸ್ಸು ಇಳಿಕೆ ಇಲ್ಲ : ಗೋಪಾಲಯ್ಯ
ಬೆಂಗಳೂರು , ಗುರುವಾರ, 23 ಫೆಬ್ರವರಿ 2023 (16:14 IST)
ಬೆಂಗಳೂರು : ರಾಜ್ಯದಲ್ಲಿ ಮದ್ಯ ಮಾರಾಟ ಮತ್ತು ಮದ್ಯ ಖರೀದಿ ವಯೋಮಾನ 21 ರಿಂದ 18 ವರ್ಷಕ್ಕೆ ಇಳಿಕೆ ಮಾಡಿ ಪರಿಷ್ಕರಿಸಿ ಹೊರಡಿಸಿದ್ದ ಅಧಿಸೂಚನೆಗೆ ಆಕ್ಷೇಪಣೆ ಸ್ವೀಕರಿಸಿದ್ದು, ಸದ್ಯ ಇರುವ ಹಳೆ ವ್ಯವಸ್ಥೆಯೇ ಮುಂದುವರಿಯಲಿದೆ ಎಂದು ಅಬಕಾರಿ ಸಚಿವ ಗೋಪಾಲಯ್ಯ ಸ್ಪಷ್ಟಪಡಿಸಿದ್ದಾರೆ.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯ ಗೋವಿಂದರಾಜು ಪ್ರಶ್ನೆಗೆ ಉತ್ತರಿಸಿದ ಸಚಿವರು, ಮದ್ಯ ಮಾರಾಟ ವಯೋಮಾನದ ಕುರಿತು ಜನವರಿ 9 ರಂದು ಅಧಿಸೂಚನೆ ಹೊರಡಿಸಲಾಗಿತ್ತು.

ಮದ್ಯ ಖರೀದಿಸುವವರ ವಯೋಮಿತಿ 21 ರಿಂದ 18 ಕ್ಕೆ ಇಳಿಸುವ ಪ್ರಸ್ತಾಪ ಮಾಡಲಾಗಿತ್ತು. ಆದರೆ ಇದಕ್ಕೆ ಅನೇಕ ಆಕ್ಷೇಪಣೆ ಬಂತು. ಹೀಗಾಗಿ ಸಮಿತಿ ರಚಿಸಿದ್ದು ಸದ್ಯ ಈಗ ಯಾವ ರೀತಿ ಇದೆಯೋ ಅದರಂತೆಯೇ ಮುಂದುವರಿಸಲು ಕ್ರಮ ವಹಿಸಲಾಗಿದೆ ಎಂದರು.

ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟದ ಕುರಿತು ಅನೇಕ ಕಡೆ ದಿಟ್ಟ ಕ್ರಮ ವಹಿಸಿದೆ. ಮುಂದೆಯೂ ಅದೇ ರೀತಿ ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಬಕಾರಿ ಸಚಿವರು ಮಾಹಿತಿ ನೀಡಿದರು.


Share this Story:

Follow Webdunia kannada

ಮುಂದಿನ ಸುದ್ದಿ

ರೈತರ ಖಾತೆಗೆ ಕಿಸಾನ್ ಸಮ್ಮಾನ್ ನಿಧಿ ಹಣ