Select Your Language

Notifications

webdunia
webdunia
webdunia
webdunia

2 ವರ್ಷದ ಬಳಿಕ ಸಿಎಂ ಸ್ಥಾನ ಬಿಟ್ಟುಕೊಡುವ ಬಗ್ಗೆ ಒಪ್ಪಂದವಾಗಿಲ್ಲ: ಡಿಕೆಶಿಗೆ ಕೌಂಟರ್ ಕೊಟ್ಟ ಎಂಬಿ ಪಾಟೀಲ್‌

Karnataka Chief Minister Post Fight, DCM DK Shivkumar, Minister MB Patil

Sampriya

ಹೊಸಪೇಟೆ , ಶುಕ್ರವಾರ, 10 ಜನವರಿ 2025 (16:00 IST)
Photo Courtesy X
ಹೊಸಪೇಟೆ (ವಿಜಯನಗರ): ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ ಎನ್ನುವ ಮೂಲಕ ಡಿಸಿಎಂ ಡಿಕೆ ಶಿವಕುಮಾರ್‌ ಅವರಿಗೆ ಬೇಹತ್ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಕೌಂಟರ್ ನೀಡಿದ್ದಾರೆ.

ಇಲ್ಲಿ ಶುಕ್ರವಾರ ಸಿರಸಂಗಿ ಲಿಂಗರಾಜ ದೇಸಾಯಿ ಅವರ 164ನೇ ಜಯಂತ್ಯೋತ್ಸವ ಪ್ರಯುಕ್ತ ಹಮ್ಮಿಕೊಂಡಿರುವ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಂದಿದ್ದ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಎರಡೂವರೆ ವರ್ಷದ ಬಳಿಕ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುವ ಬಗ್ಗೆ ಯಾವ ಒಪ್ಪಂದ ಆಗಿರುವ ಬಗ್ಗೆ ನನಗೆ ಮಾಹಿತಿ ಇಲ್ಲ, ಪೂರ್ತಿ ಅವಧಿಗೆ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ. ಸದ್ಯ ಸಿಎಂ ಕುರ್ಚಿ ಖಾಲಿಯಿಲ್ಲ ಎಂದರು.

ಡಿನ್ನರ್ ಪಾರ್ಟಿ ಮಾಡುವುದರಲ್ಲಿ ತಪ್ಪೇನಿಲ್ಲ, ಅದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯ ಇಲ್ಲ ಎಂದರು.

ಕನ್ನಡ ವಿವಿ ನೆಲ ಸಂರಕ್ಷಣೆಗೆ ಬದ್ಧ: ಹಂಪಿ ಕನ್ನಡ ವಿಶ್ವವಿದ್ಯಾಲಯ ಸಮೀಪ ನಿರ್ಮಾಣವಾಗಲಿರುವ ರೆಸಾರ್ಟ್ ಒಂದಕ್ಕಾಗಿ ವಿಶ್ವವಿದ್ಯಾಲಯಕ್ಕೆ ಒಳಪಟ್ಟ ಸ್ಥಳ ಕಬಳಿಸಲು ಅವಕಾಶ ನೀಡುವುದಿಲ್ಲ, ಕೆಐಎಡಿಬಿ ಈ ನಿಟ್ಟಿನಲ್ಲಿ ನೋಟಿಸ್ ನೀಡಿದ್ದರೂ ವಿಶ್ವವಿದ್ಯಾಲಯಕ್ಕೆ ಸೇರಿದ ಸ್ಥಳಕ್ಕೆ ಚ್ಯುತಿ ಬರಲು ಬಿಡುವುದಿಲ್ಲ ಎಂದು ಭರವಸೆ ನೀಡಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಅಮ್ಮ ಅಮ್ಮನ ಕಷ್ಟ ನೋಡಕ್ಕೆ ಆಗ್ತಿಲ್ಲ; ಕಿಡ್ನಿ ಮಾರಲು ಸರ್ಕಾರದ ಪರ್ಮಿಷನ್ ಕೇಳಿದ ಬಾಲಕ