ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ನಾಳೆ ಯಾವುದೇ ತರಹದ ಬಂದ್ ಆಚರಣೆ ಇಲ್ಲ. ವದಂತಿಗಳಿಗೆ ಕಿವಿಕೊಡಬೇಡಿ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಮೇಘರಿಕ್ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಪರಮಾರ್ಶೆ ಮಾಡಲಾಗಿದ್ದು, ಸಾರ್ವಜನಿಕರನ್ನು ಪ್ರಚೋದಿಸದಂತೆ ಸಂಘಟನೆಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಹೋರಾಟದ ಹೆಸರಿನಲ್ಲಿ ದಾಂದಲೇ ಮಾಡಿದವರನ್ನು ಬಂಧಿಸಲಾಗಿದೆ. ಹಳೆ ಅಪರಾಧಿಗಳಾಗಿದ್ದರೆ ವಿಚಾರಣೆ ನಡೆಸಿ, ಬಿಡುಗಡೆ ಮಾಡುತ್ತೇವೆ ಎಂದು ನಗರ ಪೊಲೀಸ್ ಆಯುಕ್ತ ಮೇಘರಿಕ್ ಹೇಳಿದರು.
ಇತ್ತ, ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಹಠಮಾರಿ ಧೋರಣೆ ಬಿಡಬೇಕು ಎಂದು ಆಗ್ರಹಿಸಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಹೊಸೂರು ಕರ್ನಾಟಕ ಗಡಿ ಬಂದ್ ಮಾಡಿ ಪ್ರತಿಭಟನೆ ನಡೆದಿದ್ದು, ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ