Publish Date: Sun, 15 Jul 2018 (20:03 IST)
Updated Date: Sun, 15 Jul 2018 (20:07 IST)
ವಿಧಾನಸಭೆ ಚುನಾವಣೆ ಮುಗಿದು ಸಮ್ಮಿಶ್ರ ಸರಕಾರ ರಚನೆಯಾಗಿ ತಿಂಗಳುಗಳೇ ಕಳೆಯುತ್ತಿವೆ. ಆದರೆ ಇಲ್ಲೊಬ್ಬ ಶಾಸಕರು ಚುನಾವಣೆಯಲ್ಲಿ ಗೆದ್ದರೂ ಪ್ರಯೋಜನವಿಲ್ಲದಂತಾಗಿದೆ ಎಂದಿದ್ದಾರೆ.
ಯಾರ ದುರಾದೃಷ್ಟವೋ ಗೊತ್ತಿಲ್ಲ. ಗೆದ್ದು ಪ್ರಯೋಜನವಿಲ್ಲದಂತಾಗಿದೆ. ಹೀಗಂತ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹೇಳಿಕೆ ನೀಡಿದ್ದಾರೆ. ಐದು ಬಾರಿ ಶಾಸಕರಾಗಿರುವ ಹಾಲಾಡಿ ಈ ಹೇಳಿಕೆ ನೀಡಿದ್ದಾರೆ. ಕುಂದಾಪುರದ ಬಿಜೆಪಿ ಶಾಸಕರ ಈ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ. ರಾಜ್ಯ ಸರಕಾರದ ವಿರುದ್ಧ ಹರಿಹಾಯ್ದ ಹಾಲಾಡಿ, ಬಜೆಟ್ ನಲ್ಲಿ ಕರಾವಳಿ ಪ್ರದೇಶವನ್ನು ಕಡೆಗಣಿಸಲಾಗಿದೆ. ಕೇಂದ್ರದ ಯೋಜನೆಗಳನ್ನು ರಾಜ್ಯ ಸರಕಾರ ಸರಿಯಾಗಿ ಅನುಷ್ಠಾನಕ್ಕೆ ತರುತ್ತಿಲ್ಲ.
ಹೀಗಾಗಿ ಚುನಾವಣೆಯಲ್ಲಿ ಜನತೆಗೆ ನೀಡಿದ ಆಶ್ವಾಸನೆ ಈಡೇರಿಸಲು ಆಗುತ್ತಿಲ್ಲ ಎಂದು ಹೇಳಿದ್ದಾರೆ. ಮುಂದೆಯೂ ಕೇಂದ್ರದಲ್ಲಿ ಮೋದಿ ಆಡಳಿತ ಬರಬೇಕು. ಅದಕ್ಕಾಗಿ ಕಾರ್ಯಕರ್ತರು ಶ್ರಮಿಸಬೇಕು ಎಂದಿದ್ದಾರೆ.