ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಂಬಂಧ ನನ್ನ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಡುವೆ ಯಾವುದೇ ಗೊಂದಲವಿಲ್ಲ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.
ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೊದಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ರಾಯಣ್ಣ ಬ್ರಿಗೇಡ್‌ಗೆ ವಿರೋಧ ವ್ಯಕ್ತಪಡಿಸಿದ್ದರು. ಇದೀಗ ಅವರು ಬ್ರಿಗೇಡ್ ಕುರಿತು ಏನು ಮಾತನಾಡಿಲ್ಲ. ನಮ್ಮಿಬ್ಬರ ನಡುವೆ ಯಾವುದೇ ಗೊಂದಲಗಳಿಲ್ಲ ಎಂದು ಹೇಳಿದರು.
ಮಹಿಳೆಯರ ಮೇಲೆ ನಡೆದ ದೌರ್ಜನ್ಯ ಖಂಡನೀಯ....
ಹೊಸ ವರ್ಷಾಚರಣೆ ಸಂದರ್ಭದಲ್ಲಿ ಮಹಿಳೆಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಕಿಡಿಕರಿದರು.
ರಾಜ್ಯ ಬಿಜೆಪಿ ಪಾಳಯದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತದೆ ಎಂಬ ಕಾರಣಕ್ಕಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಹೆಸರಿನ ಹೊಸ ಸಂಘಟನೆ ಹುಟ್ಟು ಹಾಕುವ ಮೂಲಕ ಪಕ್ಷದಲ್ಲಿ ತಮ್ಮ ಬಲ ಪ್ರದರ್ಶನ ಮಾಡಲು ಕೆ.ಎಸ್.ಈಶ್ವರಪ್ಪ ಮುಂದಾಗಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ