Webdunia - Bharat's app for daily news and videos

Install App

ನನ್ನ ಹಾಗೂ ಬಿಎಸ್‌ವೈ ನಡುವೆ ಯಾವುದೇ ಗೊಂದಲವಿಲ್ಲ: ಕೆ.ಎಸ್.ಈಶ್ವರಪ್ಪ

Webdunia
ಮಂಗಳವಾರ, 3 ಜನವರಿ 2017 (11:26 IST)
ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಂಬಂಧ ನನ್ನ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಡುವೆ ಯಾವುದೇ ಗೊಂದಲವಿಲ್ಲ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.
ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೊದಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ರಾಯಣ್ಣ ಬ್ರಿಗೇಡ್‌ಗೆ ವಿರೋಧ ವ್ಯಕ್ತಪಡಿಸಿದ್ದರು. ಇದೀಗ ಅವರು ಬ್ರಿಗೇಡ್ ಕುರಿತು ಏನು ಮಾತನಾಡಿಲ್ಲ. ನಮ್ಮಿಬ್ಬರ ನಡುವೆ ಯಾವುದೇ ಗೊಂದಲಗಳಿಲ್ಲ ಎಂದು ಹೇಳಿದರು.
 
ಮಹಿಳೆಯರ ಮೇಲೆ ನಡೆದ ದೌರ್ಜನ್ಯ ಖಂಡನೀಯ....
 
ಹೊಸ ವರ್ಷಾಚರಣೆ ಸಂದರ್ಭದಲ್ಲಿ ಮಹಿಳೆಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಕಾನೂನು ಸುವ್ಯವಸ್ಥೆ  ಕಾಪಾಡುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಕಿಡಿಕರಿದರು.
 
ರಾಜ್ಯ ಬಿಜೆಪಿ ಪಾಳಯದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತದೆ ಎಂಬ ಕಾರಣಕ್ಕಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಹೆಸರಿನ ಹೊಸ ಸಂಘಟನೆ ಹುಟ್ಟು ಹಾಕುವ ಮೂಲಕ ಪಕ್ಷದಲ್ಲಿ ತಮ್ಮ ಬಲ ಪ್ರದರ್ಶನ ಮಾಡಲು ಕೆ.ಎಸ್.ಈಶ್ವರಪ್ಪ ಮುಂದಾಗಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತ: ಪ್ರಾಣ ಉಳಿಸಿಕೊಳ್ಳಲು ಬಿಲ್ಡಿಂಗ್‌ನಿಂದ ವಿದ್ಯಾರ್ಥಿಗಳು ಹಾರುತ್ತಿರುವ ಭೀಕರ ವಿಡಿಯೋ ವೈರಲ್‌

ಶೀಘ್ರದಲ್ಲೇ ನಿವೃತ್ತಿ ಪಡೆಯುವುದಾಗಿ ಹೇಳಿದ್ದ: ಕ್ಯಾಪ್ಟನ್ ಸುಮೀತ್‌ ಸಬರ್ವಾಲ್‌ಗೆ ತಂದೆಯ ಕಣ್ಣೀರ ಅಂತಿಮ ವಿದಾಯ

ರಾತೋರಾತ್ರಿ ಹಿಂದೂ ಕಾರ್ಯಕರ್ತರ ಮನೆಗೆ ಪೊಲೀಸರ ಭೇಟಿ: ತನಿಖೆಗೆ ಆದೇಶ

ಬಾಂಬ್‌ ಬೆದರಿಕೆ: ನಾಗ್ಪುರ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ಲಂಡನ್ ಬೆನ್ನಲ್ಲೇ ಪ್ಯಾರಿಸ್‌ಗೆ ನಿಗದಿಯಾಗಿದ್ದ ಏರ್‌ ಇಂಡಿಯಾ ವಿಮಾನ ರದ್ದು

ಮುಂದಿನ ಸುದ್ದಿ