Select Your Language

Notifications

webdunia
webdunia
webdunia
webdunia

ಪಠ್ಯಪುಸ್ತಕ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ: ಮುನಿರತ್ನ

ಪಠ್ಯಪುಸ್ತಕ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ: ಮುನಿರತ್ನ
ಕೋಲಾರ , ಗುರುವಾರ, 2 ಜೂನ್ 2022 (08:30 IST)
ಕೋಲಾರ : ಪಠ್ಯಪುಸ್ತಕ ವಿಚಾರದಲ್ಲಿ ಯಾವುದೇ ಗೊಂದಲಗಳಿಲ್ಲ. ಈ ಬಗ್ಗೆ ಶಿಕ್ಷಣ ಸಚಿವರಿಂದ ಸಿಎಂ ವರದಿ ಕೇಳಿದ್ದಾರೆ.
 
ವರದಿ ಬಂದ ಬಳಿಕ ಅವರೇ ಉತ್ತರ ನೀಡಲಿದ್ದಾರೆ ಎಂದು ಸಚಿವ ಮುನಿರತ್ನ ಹೇಳಿದರು. ಕೆಜಿಎಫ್ ಮಾಜಿ ಶಾಸಕ ವೈ.ಸಂಪಂಗಿ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಪಠ್ಯಪುಸ್ತಕ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ವರದಿ ಕೇಳಿದ್ದಾರೆ.

ವರದಿ ಬಂದ ಬಳಿಕ ನಾನೂ ಮಾತನಾಡುವೆ ಎಂದು ಸ್ಪಷ್ಟಪಡಿಸಿದರು.  ಇದೆ ವೇಳೆ ಡಿಸಿಸಿ ಬ್ಯಾಂಕ್ ವಿಚಾರವಾಗಿ ಮಾತನಾಡಿದ ಅವರು, ಕೋಲಾರದ ಡಿಸಿಸಿ ಬ್ಯಾಂಕ್ನಲ್ಲಿ ಭಾರೀ ಭ್ರಷ್ಟಾಚಾರ ಆಗಿದೆ. ಡಿಸಿಸಿ ಬ್ಯಾಂಕ್ ಅಕ್ರಮಗಳ ತನಿಖೆಗೆ ಸಿಎಂ ಅವರಿಗೆ ಮನವಿ ಮಾಡಿದ್ದೇನೆ.

ಕೆಲವರು ಅವರ ಸ್ವಂತ ಆಸ್ತಿಯಂತೆ ಬ್ಯಾಂಕ್ ಬಳಸಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕರು ಹಾಗೂ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಿಎಂಗೆ ಮನವಿ ಮಾಡಿದ್ದೇನೆ ಎಂದು ಹೇಳಿದರು. 

 

Share this Story:

Follow Webdunia kannada

ಮುಂದಿನ ಸುದ್ದಿ

ಗಂಗೂಲಿ ರಾಜಕೀಯ ಪ್ರವೇಶ ಫಿಕ್ಸ್?