Select Your Language

Notifications

webdunia
webdunia
webdunia
webdunia

ಬಿಜೆಪಿಯಲ್ಲಿ ಭಿನ್ನಮತವಿಲ್ಲ, ಅಸಮಾಧಾನವಿಲ್ಲ: ಕಟ್ಟಾ

ಬಿಜೆಪಿಯಲ್ಲಿ ಭಿನ್ನಮತವಿಲ್ಲ, ಅಸಮಾಧಾನವಿಲ್ಲ: ಕಟ್ಟಾ
ಮೈಸೂರು , ಭಾನುವಾರ, 7 ಮೇ 2017 (11:37 IST)
ಬಿಜೆಪಿ ಪಕ್ಷದಲ್ಲಿ ಭಿನ್ನಮತವಿಲ್ಲ ಅಸಮಾಧಾನವಂತೂ ಇಲ್ಲವೇ ಇಲ್ಲ ಎಂದು ಹಿರಿಯ ಬಿಜೆಪಿ ಮುಖಂಡ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಹೇಳಿದ್ದಾರೆ.
 
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್,ಯಡಿಯೂರಪ್ಪ ಮತ್ತು ಕೆ.ಎಸ್.ಈಶ್ವರಪ್ಪ ಒಂದಾಗಿದ್ದಾರೆ. ಅವರ ಮಧ್ಯೆ ಭಿನ್ನಾಭಿಪ್ರಾಯವಿದೆ ಎನ್ನುವುದರಲ್ಲಿ ಸತ್ಯಾಂಶವಿಲ್ಲ ಎಂದು ತಿಳಿಸಿದ್ದಾರೆ.
 
ಮುಂಬರುವ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ಯಡಿಯೂರಪ್ಪ ಮತ್ತು ಈಶ್ವರಪ್ಪ ಒಂದಾಗಿ ಪ್ರವಾಸ ಮಾಡಲಿದ್ದಾರೆ. ಬಿಜೆಪಿ ನಾಯಕರಲ್ಲಿ ವೈಮನಸ್ಸಿದೆ ಎನ್ನುವುದು ಸತ್ಯಕ್ಕೆ ದೂರವಾದ ಸಂಗತಿ ಎಂದರು.
 
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಜನವಿರೋಧಿ, ರೈತ ವಿರೋಧಿ ಸರಕಾರವಾಗಿದ್ದು, ಯಡಿಯೂರಪ್ಪ ನಾಯಕತ್ವದಲ್ಲಿ ಬಿಜೆಪಿ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಹಿರಿಯ ಬಿಜೆಪಿ ಮುಖಂಡ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಜನರ ಎದುರು ಮುಖ ತೋರಿಸಲು ಆಗುತ್ತಿಲ್ಲ ಎಂದ ಅರವಿಂದ್ ಲಿಂಬಾವಳಿ