Publish Date: Sat, 16 Nov 2019 (10:32 IST)
Updated Date: Sat, 16 Nov 2019 (10:34 IST)
ಬೆಂಗಳೂರು : ಅನರ್ಹ ಶಾಸಕ ಎಸ್.ಟಿ.ಸೋಮಶೇಖರ್ ಹಾಗೂ ನಟ, ಬಿಜೆಪಿ ನಾಯಕ ಜಗ್ಗೇಶ್ ನಡುವೆ ಮನಸ್ತಾಪವಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಅನರ್ಹ ಶಾಸಕ ಎಸ್.ಟಿ.ಸೋಮಶೇಖರ್ ಸ್ಪಷ್ಟನೆಯೊಂದನ್ನು ನೀಡಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಗ್ಗೇಶ್ ಹಾಗೂ ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ . ಜಗ್ಗೇಶ್ ನನಗೆ ಕರೆ ಮಾಡಿ ಮಾತನಾಡಿದ್ದಾರೆ ಎಂದು ಹೇಳಿದ್ದಾರೆ.
ಅಲ್ಲದೇ ಸಿನಿಮಾ ಶೂಟಿಂಗ್ ಹಾಗೂ ಇನ್ನಿತರ ಕೆಲಸಗಳನ್ನು ಮುಂದೂಡಿ ಚುನಾವಣೆಯ 21 ದಿನಗಳ ಕಾಲ ನನ್ನ ಪರ ಪ್ರಚಾರ ಮಾಡ್ತಾರೆ. ಪ್ರಚಾರ ಮಾಡೋದಾಗಿ ಜಗ್ಗೇಶ್ ಹೇಳಿದ್ದಾರೆ ಎಂದು ಬೆಂಗಳೂರಿನಲ್ಲಿ ಅನರ್ಹ ಶಾಸಕ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.