Publish Date: Thu, 27 Dec 2018 (16:55 IST)
Updated Date: Thu, 27 Dec 2018 (16:57 IST)
ಮೈತ್ರಿ ಸರಕಾರದ ಸಂಪುಟ ವಿಸ್ತರಣೆ ಕುರಿತಂತೆ ಪಕ್ಷದಲ್ಲಿ ಆಗಲೀ ಅಥವಾ ಡಿಸಿಎಂ ಮತ್ತು ತಮ್ಮ ನಡುವೆ ಯಾವುದೇ ಭಿನ್ನಮತವಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಗೃಹಖಾತೆ ಬಿಟ್ಟುಕೊಡುವ ಕುರಿತಂತೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಜೊತೆ ವಾದ- ವಾಗ್ದಾದವೂ ನಡೆಲಿಲ್ಲ. ಗೃಹ ಖಾತೆ ಬಿಟ್ಟು ಕೊಡಿ ಎಂದು ಪಟ್ಟು ಹಿಡಿದಿಲ್ಲ ಎಂದರು.
ಬಾದಾಮಿಗೆ ತೆರಳುವ ಮುನ್ನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೂತನ ಸಚಿವರಿಗೆ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಅವರು ಖಾತೆಗಳಿಗೂ ಹಂಚಿಕೆ ಮಾಡುತ್ತಾರೆ. ಹೀಗಾಗಿ ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಹೇಳಿದರು.
ಇದೇ ವೇಳೆ ಬಿಜೆಪಿಯವರ ವಿರುದ್ಧ ಕಿಡಿಕಾರಿದ ಸಿದ್ರಾಮಯ್ಯ, ಬಿಜೆಪಿ ಶಾಸಕ ಉಮೇಶ ಕತ್ತಿ ಹೇಳಿಕೆಯಲ್ಲಿ ಯಾವುದೇ ಸತ್ಯಾಂಶವಿಲ್ಲ. ಸರಕಾರ ಅವಧಿ ಪೂರ್ಣಗೊಳಿಸಲಿದೆ ಎಂದರು.