ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ನಿರಾಸೆಯಿಲ್ಲ : ಲಕ್ಷ್ಮಣ ಸವದಿ

Webdunia
ಮಂಗಳವಾರ, 30 ಮೇ 2023 (09:01 IST)
ಚಿಕ್ಕೋಡಿ : ಮನುಷ್ಯನಿಗೆ ದೂರದೃಷ್ಟಿ ಮತ್ತು ತಾಳ್ಮೆ ರಾಜಕೀಯದಲ್ಲಿ ಬಹಳ ಮುಖ್ಯ. ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ನನಗಂತೂ ನಿರಾಸೆ ಆಗಿಲ್ಲ. ಒಳ್ಳೆಯ ದಿನಗಳು ಬರುತ್ತವೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದ್ದಾರೆ.
 
ಅಥಣಿ ಪಟ್ಟಣದಲ್ಲಿ ಪ್ರತಿಕ್ರಿಯೆ ನೀಡಿದ ಸವದಿ, ನಿರೀಕ್ಷೆ ಯಾರಿಗೆ ಇರಲ್ಲ, ಎಲ್ಲರಿಗೂ ಸಹ ನಿರೀಕ್ಷೆ ಇದ್ದೇ ಇರುತ್ತದೆ. ರಾಜಕೀಯದಲ್ಲಿ ಯಾರೂ ಸನ್ಯಾಸಿಗಳಲ್ಲ. ಎಲ್ಲರೂ ಸಚಿವರಾಗಬೇಕು, ನಂತರ ಡಿಸಿಎಂ ಆಗಬೇಕು, ಬಳಿಕ ಸಿಎಂ ಆಗಬೇಕು ಎಂದು ನಿರೀಕ್ಷೆ ಇಟ್ಟಿರುತ್ತಾರೆ. ಆಸೆಗಳಿಗೆ ಕೊನೆ ಯಾವತ್ತೂ ಇರುವುದಿಲ್ಲ. ಅದು ಮನುಷ್ಯನ ಸ್ವಾಭಾವಿಕ ಮನಸ್ಥಿತಿ ಎಂದರು.

ಎರಡೂವರೆ ವರ್ಷ ಮಾತ್ರ ಸಿದ್ದರಾಮಯ್ಯ ಸಿಎಂ ಆಗಿರುತ್ತಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅದನ್ನು ಸಿದ್ದರಾಮಯ್ಯ ಅವರನ್ನೇ ಕೇಳಬೇಕು. ಹೈಕಮಾಂಡ್ನಲ್ಲಿ ಯಾವ ರೀತಿ ಚರ್ಚೆ ಆಗಿದೆ ಗೊತ್ತಿಲ್ಲ.

ಅವು 4 ಗೋಡೆಗಳ ಮಧ್ಯೆ ನಡೆದಿರುವಂತದ್ದು. ಸಿದ್ದರಾಮಯ್ಯ ಮತ್ತು ಪಕ್ಷದ ವರಿಷ್ಠರ ನಡುವೆ ನಡೆದ ಚರ್ಚೆಯನ್ನು ಬಹಿರಂಗಪಡಿಸಿಲ್ಲ. ಹೊರಗಡೆ ಕೇವಲ ಊಹಾಪೋಹಗಳು ಮಾತ್ರ ಇವೆ. ಅವುಗಳಿಗೆ ರೆಕ್ಕೆಪುಕ್ಕ ಕಟ್ಟಿ ಕಾಗೆ ಹಾರಿಸುವ ಕೆಲಸ ಕೆಲ ಜನ ಮಾಡುತ್ತಿದ್ದಾರೆ ಎಂದು ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವೀಟ್ ಖರೀದಿಸಿದ ರಾಹುಲ್ ಗಾಂಧಿಗೆ ಶಾಕಿಂಗ್ ಬೇಡಿಕೆಯಿಟ್ಟ ಅಂಗಡಿ ಮಾಲೀಕ

ನಕ್ಸಲಿಸಂ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದಿಟ್ಟ ಉತ್ತರ

ಪತ್ನಿ ಕೃತಿಕಾ ರೆಡ್ಡಿ ಹತ್ಯೆ ಬಗ್ಗೆ ಕೊನೆಗೂ ಸ್ಪೋಟಕ ಸತ್ಯ ಬಾಯ್ಬಿಟ್ಟ ಡಾ ಮಹೇಂದ್ರ ರೆಡ್ಡಿ

ಓಲಾ ಕಂಪೆನಿ ಎಂಜಿನಿಯರ್ ಅನುಮಾನಸ್ಪದ ಸಾವು, 28ಪುಟಗಳ ಡೆತ್‌ನೋಟ್‌ನಲ್ಲಿತ್ತು ಶಾಕಿಂಗ್ ಸಂಗತಿ

ಪ್ರತಿ ವರ್ಷದಂತೆ ಈ ಬಾರಿಯೂ ದೀಪಾವಳಿಗೆ ಈ ಕೆಲಸ ಮಾಡಲು ಮರೆಯದ ನರೇಂದ್ರ ಮೋದಿ

ಮುಂದಿನ ಸುದ್ದಿ
Show comments