Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನವಿಲ್ಲ : ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ
ಬೆಂಗಳೂರು , ಶುಕ್ರವಾರ, 24 ಜೂನ್ 2016 (14:21 IST)
ಸಂಪುಟ ಪುನಾರಚನೆ ಕುರಿತಂತೆ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನವಿಲ್ಲ. ಕಾಂಗ್ರೆಸ್ ಶಾಸಕರಲ್ಲಿ ಅಸಮಾಧಾನವಿದೆ ಎಂದು ಬರುತ್ತಿರುವ ವರದಿಗಳು ಸುಳ್ಳಿನಿಂದ ಕೂಡಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
 
ಸಂಪುಟ ಪುನಾರಚನೆ ಕುರಿತಂತೆ ಸಚಿವರೊಂದಿಗೆ ಪ್ರತ್ಯೇಕ ಸಭೆ ನಡೆಸಿಲ್ಲ. ಶಾಸಕರಾಗಲಿ ಅಥವಾ ಸಚಿವರಾಗಲಿ ಸಂಪುಟ ಪುನಾರಚನೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿಲ್ಲ. ಮಾಧ್ಯಮಗಳ ವರದಿಗಳು ಆದಾರರಹಿತವಾಗಿದೆ ಎಂದು ತಿರುಗೇಟು ನೀಡಿದರು.
 
ಸಂಪುಟ ಪುನಾರಚನೆ ಸಂದರ್ಭದಲ್ಲಿ ಕೆಲವರನ್ನು ಕೈ ಬಿಡಲಾಗುತ್ತದೆ ಎಂದು ಮಂತ್ರಿ ಪರಿಷತ್ ಸಭೆಯಲ್ಲಿ ಸ್ಪಷ್ಟಪಡಿಸಿದ್ದೆ. ಆದ್ದರಿಂದ ಶಾಸಕರೊಂದಿಗೆ, ಸಚಿವರೊಂದಿಗೆ ಪ್ರತ್ಯೇಕವಾಗಿ ಚರ್ಚೆ ನಡೆಸಲು ಹೋಗಿಲ್ಲ. ಒಂದು ವೇಳೆ ಯಾರಿಗಾದರೂ ಅಸಮಾಧಾನವಾಗಿದ್ದಲ್ಲಿ ಅವರೊಂದಿಗೆ ಚರ್ಚೆ ನಡೆಸುತ್ತೇನೆ ಎಂದು ಭರವಸೆ ನೀಡಿದರು.
 
ಹಿರಿಯ ಕಾಂಗ್ರೆಸ್ ಮುಖಂಡ ವಿ.ಶ್ರೀನಿವಾಸ್ ಪ್ರಸಾದ್, ಎ.ಬಿ.ಮಲಕರೆಡ್ಡಿ, ಮತ್ತು ಸಮಾನ ಮನಸ್ಕ ವೇದಿಕೆ ಶಾಸಕರ ಮುಖಂಡ ಎಸ್.ಟಿ.ಸೋಮಶೇಖರ್ ಪ್ರತ್ಯೇಕ ಸಭೆ ನಡೆಸಿ ನಾಯಕತ್ವ ಬದಲಾವಣೆಗೆ ಒತ್ತಾಯಿಸಿದ್ದಾರೆ ಎನ್ನುವ ಆರೋಪಿಗಳು ಸತ್ಯದಿಂದ ದೂರವಾಗಿವೆ ಎಂದು ಸಿಎಂ ಸಿದ್ದಾರಾಮಯ್ಯ ತಿಳಿಸಿದ್ದಾರೆ.   

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಭಾರತದ ಮಾರುಕಟ್ಟೆಗೆ ಸೋನಿ ಎಕ್ಸ್‌ಪೇರಿಯಾ ಎಕ್ಸ್‌ಎ ಡ್ಯುಯಲ್ ಬಿಡುಗಡೆ!