ಕಾಂಗ್ರೆಸ್​​ನ ಯಾವುದೇ ಆಟ ನಡೆಯಲ್ಲ-ಸಿಎಂ

Webdunia
ಬುಧವಾರ, 10 ಆಗಸ್ಟ್ 2022 (19:38 IST)
ಮುಂದಿನ ಚುನಾವಣೆ ಮಾಜಿ ಮುಖ್ಯಮಂತ್ರಿ ಬಿ.ಎಸ್​​ ಯಡಿಯೂರಪ್ಪ ಅವರ ಮಾರ್ಗದರ್ಶನ ಹಾಗೂ ಬೊಮ್ಮಾಯಿ‌ ನೇತೃತ್ವದಲ್ಲಿ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಾಂಗ್ರೆಸ್ ಟ್ವೀಟ್​​ಗೆ ತಿರುಗೇಟು ನೀಡಿದರು. ಸಿದ್ದರಾಮಯ್ಯ ಉತ್ಸವ ಮೂಲಕ ಕಾಂಗ್ರೆಸ್ ಒಳಜಗಳ, ಬೀದಿ ಜಗಳ ದೊಡ್ಡದಾಗಿದೆ. ಕೋಳಿವಾಡ ಅಂಥವರೇ ಇಂದು ಸಿದ್ದರಾಮಯ್ಯ ಅವರನ್ನು ಬೈಯ್ಯುವಂತಹ ಸ್ಥಿತಿಗೆ ಬಂದಿದೆ. ಮುಂದಿನ ಮುಖ್ಯಮಂತ್ರಿಗಳ ಹೋರಾಟ ಜಾಸ್ತಿಯಾಗುತ್ತಿದೆ. ಕಾಂಗ್ರೆಸ್​​ನಲ್ಲಿನ ಆಂತರಿಕ ಜಗಳ, ಗೊಂದಲ ಮುಚ್ಚಿಡುವುದಕ್ಕೆ ಬಿಜೆಪಿ 3ನೇ ಸಿಎಂಗೆ ಕಸರತ್ತು ಎಂಬುದಾಗಿ ಟ್ವೀಟ್ ಮಾಡಿದೆ. ಬಿಜೆಪಿ ಸರ್ಕಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ತಿಳಿಸಿದರು. ಗೊಂದಲ ಸೃಷ್ಟಿ ಮಾಡುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಬಿಜೆಪಿಯಲ್ಲಿ ಯಾವುದೇ ಗೊಂದಲಗಳಿಲ್ಲ. ಗೊಂದಲಗಳನ್ನು ಸೃಷ್ಟಿಸುವ ಕಾಂಗ್ರೆಸ್​​ನ ಯಾವುದೇ ಆಟ ನಡೆಯಲ್ಲ. ಕಾಂಗ್ರೆಸ್ ಮೊದಲಿಗೆ ಅವರ ಜಗಳ ಬಗೆಹರಿಸಿ ಒಟ್ಟಾಗಿ ಚುನಾವಣೆಗೆ ಹೋಗಲಿ. ಕಾಂಗ್ರೆಸ್ ಭವಿಷ್ಯ ಏನೆಂಬುದು ಮುಂದಿನ ಚುನಾವಣೆಯಲ್ಲಿ ಗೊತ್ತಾಗಲಿದೆ. ಪಕ್ಷದ ಹಗರಣಗಳು ಬಯಲಿಗೆ ಬಂದಿದೆ. ಇವೆಲ್ಲ ಗೊಂದಲಗಳನ್ನು ಮುಚ್ಚಿ ಹಾಕಲು ಕಾಂಗ್ರೆಸ್ ಇಂತಹ ಟ್ವೀಟ್ ಮಾಡುತ್ತಿದೆ ಎಂದು​​ ಆರೋಪಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಲವು ಮಕ್ಕಳ ಕಣ್ಣಿಗೆ ಗಾಯ ಬೆನ್ನಲ್ಲೇ 59 ಕಾರ್ಬೈಡ್ ಗನ್ ವಶಕ್ಕೆ, ಇಬ್ಬರು ಅರೆಸ್ಟ್‌

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ದೆಹಲಿಯಲ್ಲಿ ಈ ವ್ಯಾಪಾರದಲ್ಲಿ ಭಾರೀ ಏರಿಕೆ

ಮುಂದಿನ ಸುದ್ದಿ
Show comments