Select Your Language

Notifications

webdunia
webdunia
webdunia
webdunia

ಸರ್ಕಾರಿ ಕಾಲೇಜು ಪಿಜಿ ಕೋರ್ಸ್ ಶುಲ್ಕ ಹೆಚ್ಚಳವಿಲ್ಲ

PG course fees
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸ್ನಾತಕೋತ್ತರ ಪದವಿ ಪ್ರವೇಶದ ಶುಲ್ಕ ಹೆಚ್ಚಳ ಮಾಡುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿ ಆದೇಶ ಹೊರಡಿಸಿದೆ. MCA, MBA ಒಳಗೊಂಡಂತೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿಗೆ 2023-24 ನೇ ಸಾಲಿನಲ್ಲಿ ಪ್ರವೇಶ ಪಡೆಯಲಿರುವ ವಿದ್ಯಾರ್ಥಿಗಳಿಗೆ ಹಿಂದಿನ ವರ್ಷದ ಶುಲ್ಕವೇ ಅನ್ವಯವಾಗಲಿದೆ. ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಗೆ ಒಳಪಡುವ ಕೆಲವು ಪ್ರಥಮ ದರ್ಜೆ ಕಾಲೇಜುಗಳಲ್ಲಿ ಆರಂಭಿಸಿರುವ ಪಿಜಿ ಕೋರ್ಸ್‌ಗಳಿಗೆ 2019-20 ನೇ ಸಾಲಿನಲ್ಲಿದ್ದ ಶುಲ್ಕವನ್ನು ಮುಂದಿನ ವರ್ಷಗಳಲ್ಲೂ ಮುಂದುವರೆಸಲಾಗಿತ್ತು. ಇದೀಗ 2023-24 ನೇ ಸಾಲಿಗೂ ಅದೇ ಶುಲ್ಕವನ್ನೇ ನಿಗದಿ ಮಾಡಲಾಗಿದೆ. ಗ್ರಾಮಿಣ ಪ್ರದೇಶದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮತ್ತು ಪಾಲಕರಿಗೆ ಆರ್ಥಿಕ ಹೊರೆಯಾಗದಂತೆ ನೋಡಿಕೊಳ್ಳುವ ಉದ್ದೇಶದಿಂದ ಶುಲ್ಕ ಹೆಚ್ಚಳ ಮಾಡಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಗಾಂಧಿ ಸ್ಮಾರಕ ನಿಧಿ ಜಾಲತಾಣಕ್ಕೆ ಚಾಲನೆ ಕೊಟ್ಟ ಸಿಎಂ