Publish Date: Wed, 20 Sep 2017 (12:50 IST)
Updated Date: Wed, 20 Sep 2017 (12:52 IST)
ಸಿದ್ದರಾಮಯ್ಯರಷ್ಟು ಸುಳ್ಳು ಹೇಱುವ ವ್ಯಕ್ತಿ ಯಾರು ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಪ್ರತಿಯೊಂದಕ್ಕೂ ಪ್ರಧಾನಿ ಮೋದಿಯವರತ್ತ ಕೈ ತೋರಿಸುವುದು ಕಾಯಕವಾಗಿದೆ. ರಾಜ್ಯ ಸರಕಾರ ಫೋನ್ ಕದ್ದಾಲಿಕೆ ಮಾಡುತ್ತಿದೆ ಎಂದು ಆರೋಪಿಸಿದರೆ, ಕೇಂದ್ರ ಸರಕಾರವೇ ಫೋನ್ ಕದ್ದಾಲಿಕೆ ಮಾಡುತ್ತಿದೆ ಎನ್ನುವ ಹೇಳಿಕೆ ನೀಡುತ್ತಿರುವ ಸಿಎಂ ವರ್ತನೆ ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಟೀಕಿಸಿದರು.
ಉತ್ತರ ಕರ್ನಾಟಕದಿಂದ ಸ್ಪರ್ಧಿಸುವ ವಿಚಾರ ಕುರಿತಂತೆ ಪ್ರತಿಕ್ರಿಯೆ ನೀಡಿದ ಅವರು, ಉತ್ತರ ಕರ್ನಾಕಟಕದಲ್ಲಿ ಸ್ಪರ್ಧಿಸಬೇಕು ಎನ್ನುವುದು ಈಗಾಗಲೇ ತೀರ್ಮಾನವಾಗಿದೆ. ಅದರಲ್ಲಿ ಯಾವುದೇ ಅನುಮಾನ ಬೇಡ ಎಂದರು.
ವಿಜಯಪುರ ಅಥವಾ ಬಾಗಲಕೋಟೆ ಜಿಲ್ಲೆಯಿಂದ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.