Publish Date: Thu, 04 May 2023 (09:26 IST)
Updated Date: Thu, 04 May 2023 (02:29 IST)
ರಾಮನಗರ : ಇಡೀ ಹಿಂದೂಸ್ತಾನದಲ್ಲಿ ಕುಮಾರಸ್ವಾಮಿಯಂತಹ ಮತ್ತೊಬ್ಬ ಮುಖ್ಯಮಂತ್ರಿಯಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ತಿಳಿಸಿದರು.
ಚನ್ನಪಟ್ಟಣದ ಶೇರು ಸರ್ಕಲ್ ಬಳಿ ಬಹಿರಂಗ ಸಭೆ ನಡೆಸಿ ಮಾತನಾಡಿದ ಅವರು, ಕುಮಾರಸ್ವಾಮಿ ಕಳೆದೆರಡು ದಿನಗಳಲ್ಲಿ ಹದಿನಾರು ಕ್ಷೇತ್ರಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಈ ದೇಶದಲ್ಲಿ ರೈತನಿಗೆ ಪಿಂಚಣಿ ಕೊಡುತ್ತೇನೆ ಎಂದು ಹೇಳುವ ವ್ಯಕ್ತಿ ಇದ್ರೆ ಅದು ಕುಮಾರಸ್ವಾಮಿ.
ನುಡಿದಂತೆ ನಡೆಯುವ ರಾಜಕಾರಣಿ ಯಾವನಾದ್ರು ಇದ್ದರೇ ಅವರೇ ಕುಮಾರಸ್ವಾಮಿಯಾಗಿದ್ದಾರೆ. ಕಾಂಗ್ರೆಸ್ನವರ ವ್ಯಂಗ್ಯದ ನಡುವೆ ಸಾಲ ಮನ್ನಾ ಮಾಡಿದರು. ಬಜೆಟ್ ಮೇಲಿನ ಚರ್ಚೆಯಲ್ಲಿ ಎರಡನೇ ಸಾಲಿನಲ್ಲಿ ಕುಳಿತ ಸಿದ್ದರಾಮಯ್ಯ ವ್ಯಂಗ್ಯ ಮಾಡಿ ಹೊರಗೆ ಹೋಗುತ್ತಾರೆ ಎಂದು ಹೇಳಿದರು.
ಯುವಕರು ದೇಶದ ಮುಂದಿನ ಪ್ರಜೆಗಳು ಈ ಪಕ್ಷವನ್ನ ಉಳಿಸಿ. ನಾವು ತಾಯಿ ಭುವನೇಶ್ವರಿ ಮಕ್ಕಳು ನಾಡಿಗಾಗಿ ತಮ್ಮ ಶಕ್ತಿ ತೋರಿಸಿ ಎಂದ ಹೆಚ್ಡಿಡಿ, ಕುಮಾರಸ್ವಾಮಿ ಇಡೀ ರಾಜ್ಯ ಸುತ್ತಬೇಕು ಅವರು ಬರಲು ಸಾಧ್ಯವಿಲ್ಲ ಎಂದರು.