Select Your Language

Notifications

webdunia
webdunia
webdunia
webdunia

ಮೈತ್ರಿ ಸರ್ಕಾರದಲ್ಲಿ ಯಾವುದೇ ಸಮಸ್ಯೆಯಾಗಿಲ್ಲ – ಸಿಎಂ ಕುಮಾರಸ್ವಾಮಿ

ಮೈತ್ರಿ ಸರ್ಕಾರದಲ್ಲಿ ಯಾವುದೇ ಸಮಸ್ಯೆಯಾಗಿಲ್ಲ – ಸಿಎಂ ಕುಮಾರಸ್ವಾಮಿ
ಬೆಂಗಳೂರು , ಬುಧವಾರ, 16 ಜನವರಿ 2019 (14:02 IST)
ಬೆಂಗಳೂರು : ಮೈತ್ರಿ ಸರ್ಕಾರದಲ್ಲಿ ಯಾವುದೇ ಸಮಸ್ಯೆಯಾಗಿಲ್ಲ. ನಾನಂತೂ ಕೂಲ್ ಆಗಿಯೇ ಇದ್ದೇನೆ ಎಂದು ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.


ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾವೆಲ್ಲರೂ ಆರಾಮಾಗಿ ಇದ್ದೇವೆ. ನಿಮಗೆ ಮತ್ತು ಬೇರೆ ಅವರಿಗೂ ಶಾಸಕರು ನಾಟ್ ರಿಚೆಬಲ್ ಆಗಿರಬಹುದು. ಆದರೆ ಅವರೆಲ್ಲರು ನನಗೆ ರಿಚೆಬಲ್ ಇದ್ದಾರೆ. ಮೂರು ದಿನಗಳಿಂದ ಎಲ್ಲರ ಜೊತೆಗೂ ನಾನು ಮಾತನಾಡಿದ್ದೇನೆ’ ಎಂದು ಹೇಳಿದ್ದಾರೆ.


‘ಜೆಡಿಎಸ್ ನಿಂದ ಆಪರೇಷನ್ ಮಾಡುವ ಅವಶ್ಯಕತೆ ಇಲ್ಲ. ಎಲ್ಲದಕ್ಕೂ ಸೂಕ್ತ ಸಮಯ ಬರಬೇಕು. ನಮ್ಮ ಸರ್ಕಾರ ಸುಭದ್ರವಾಗಿದೆ ರೆಸಾರ್ಟ್ ಗೆ ಶಾಸಕರನ್ನು ಶಿಫ್ಟ್ ಮಾಡುವ ಅವಶ್ಯಕತೆಯೂ ನಮಗಿಲ್ಲ’ ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿಯವರು ಭಯದಲ್ಲಿದ್ದಾರೆ ಎಂದ ಬಿಎಸ್ಪಿ ಶಾಸಕ!